ಕುಶಾಲನಗರ, ಆ 21:ಕೂಡುಮಂಗಳೂರು ಗ್ರಾಮಪಂಚಾಯತ್ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಗೆಲುವು ಸಾಧಿಸಿದ್ದ ಹಾರಂಗಿಯ ಭಾಸ್ಕರ್ ನಾಯಕ್ ಸೋಮವಾರ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.
ಗ್ರಾಮಪಂಚಾಯತ್ ಪ್ರವೇಶದ್ವಾರ ಹಾಗೂ ಅಧ್ಯಕ್ಷರ ಕೊಠಡಿಗೆ ಶಾಸ್ತ್ರೋಕ್ತವಾಗಿ ಪೂಜೆ ನೆರವೇರಿಸಿ ಅಧ್ಯಕ್ಷ ಸ್ಥಾನ ಅಲಂಕರಿಸಿದರು.
ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲನೇ ಅವಧಿಯಲ್ಲಿ ಉಪಾಧ್ಯಕ್ಷನಾಗಿ ಸೇವೆ ಸಲ್ಲಿಸಿದ್ದು ಎರಡನೇ ಅವಧಿಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಲು ಅವಕಾಶ ದೊರೆತಿದೆ. ಪಕ್ಷದ ಪ್ರಮುಖರು,ಕಾರ್ಯಕರ್ತರು, ಗ್ರಾಪಂ ಆಡಳಿತ ಮಂಡಳಿ ಸದಸ್ಯರ ಸಹಕಾರದಿಂದ ತನಗೆ ಈ ಸ್ಥಾನ ಅಲಂಕರಿಸಲು ಸಾಧ್ಯವಾಯಿತು. ತನ್ನ ಅವಧಿಯಲ್ಲಿ ದಿನದ 24 ಗಂಟೆಗಳ ಕಾಲ ಕೂಡ ಸೇವೆ ಸಲ್ಲಿಸಲು ಬದ್ದನಾಗಿದ್ದೇನೆ. ತಾಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ, ಶಾಸಕರು, ಸಂಸದರ ಅನುದಾನಗಳನ್ನು ತಂದು ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಿದ್ದೇನೆ. ಗ್ರಾಮಸ್ಥರು ತಮ್ಮ ಸಮಸ್ಯೆಗಳನ್ನು ನೇರವಾಗಿ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಲು ಮುಂದಾಗುವಂತೆ ಅವರು ತಿಳಿಸಿದರು.
ಬಿಜೆಪಿ ಮುಖಂಡರಾದ ಕುಮಾರಪ್ಪ, ಎಂ.ಎಂ.ಚರಣ್, ಕೆ.ಜಿ
ಮನು, ಕೆ.ಡಿ.ಪ್ರಶಾಂತ್ ಸೇರಿದಂತೆ ಗ್ರಾಮದ ಪ್ರಮುಖರು, ಗ್ರಾಪಂ ಮಾಜಿ ಅಧ್ಯಕ್ಷರುಗಳು, ಸದಸ್ಯರುಗಳು ಮಾಲಾರ್ಪಣೆ ಮಾಡಿ ನೂತನ ಅಧ್ಯಕ್ಷರಿಗೆ ಶುಭ ಕೋರಿದರು.
ಈ ಸಂದರ್ಭ ಅವರ ಕುಟುಂಬ ವರ್ಗದವರು ಹಾಜರಿದ್ದರು.
Back to top button
error: Content is protected !!