ಕುಶಾಲನಗರ, ಆ.21: ಸೋಮವಾರಪೇಟೆ ತಾಲ್ಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ
ನೂತನ ಅಧ್ಯಕ್ಷರಾಗಿ ನೇರುಗಳಲೆ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಕೆ.ಆರ್.ರತ್ನಕುಮಾರ್ ಹಾಗೂ ಕಾರ್ಯದರ್ಶಿಯಾಗಿ ಏಳನೇ ಹೊಸಕೋಟೆ
ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಟಿ.ವಿ.ಶೈಲಾ ಆಯ್ಕೆಯಾಗಿದ್ದಾರೆ.
ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ.ಸೋಮಶೇಖರ್ ಅವರು ಸಂಘದ ನೂತನ ಅಧ್ಯಕ್ಷ ಹಾಗೂ ಕಾರ್ಯದರ್ಶಿ ಹೆಸರನ್ನು ಪ್ರಕಟಿಸಿದರು.
ಸಂಘದ ತಾಲ್ಲೂಕು ಘಟಕದ ಅಧ್ಯಕ್ಷರಾಗಿದ್ದ ಡಿ.ಪಿ.ಧರ್ಮಪ್ಪ ಅವರು
ಮೈಸೂರು ಜಿಲ್ಲೆಗೆ ವರ್ಗಾವಣೆಯಾದ ಹಿನ್ನಲೆಯಲ್ಲಿ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಯಿತು.
ಶಿಕ್ಷಕ ಕೆ.ಆರ್.ರತ್ನಕುಮಾರ್, ಈ ಮೊದಲು ಸಂಘದ ಕಾರ್ಯದರ್ಶಿಯಾಗಿ ಹಾಗೂ ಶಿಕ್ಷಕಿ ಟಿ.ವಿ.ಶೈಲಾ ಸಂಘದ ಖಜಾಂಜಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಅಧಿಕಾರ ಹಸ್ತಾಂತರ ಮಾಡಿದ ಸಂಘದ ನಿಕಟ ಪೂರ್ವ ಅಧ್ಯಕ್ಷ ಡಿ.ಪಿ.ಧರ್ಮಪ್ಪ ಮಾತನಾಡಿ, ಸಂಘವು ಶೈಕ್ಷಣಿಕ ಚಟುವಟಿಕೆಗಳೊಂದಿಗೆ ಶಿಕ್ಷಕರ ಕ್ಷೇಮಾಭಿವೃದ್ಧಿಗೆ ಶ್ರಮಿಸುತ್ತಿದೆ. ಈ ತನಕ ತಾವು ಸಂಘದ ಏಳ್ಗೆಗೆ ಶ್ರಮಿಸಿದ್ದು, ಶಿಕ್ಷಕರ ಸಹಕಾರವನ್ನು ಸ್ಮರಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್ ಮಾತನಾಡಿ, ಈ ಸಂಘವು ಉತ್ತಮ ಚಟುವಟಿಕೆಗಳ ಮೂಲಕ ಉತ್ತಮ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಶ್ಲಾಘಿಸಿದರು.
ತಾಲ್ಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ಎಂ.ಹೇಮಂತ್,
ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಕಾರ್ಯದರ್ಶಿ ಎಚ್.ಜೆ.ಕುಮಾರ್, ಖಜಾಂಚಿ ಎ.ಸಿ.ಮಂಜುನಾಥ್, ಸಂಘಟನಾ ಕಾರ್ಯದರ್ಶಿ ದಯಾನಂದ ಪ್ರಕಾಶ್, ಪದಾಧಿಕಾರಿ ಪ್ರಕಾಶ್, ಸಂಘದ ಮೈಸೂರು ವಿಭಾಗದ ಉಪಾಧ್ಯಕ್ಷ ಪಿ. ನವೀನ್ ಕುಮಾರ್ , ಸಂಘದ ಪದಾಧಿಕಾರಿಗಳಾದ ಕೆ.ಪಿ.ಜಯಕುಮಾರ್, ಯಶವಂತ್, ಶ್ರೀಕಾಂತ್, ಪೂವಯ್ಯ, ಬಿ.ಪಿ.ಸವಿತಾ, ರಜನಿ, ಶಿವಕುಮಾರಿ, ಶಿವಣ್ಣ, ಇತರೆ ಪದಾಧಿಕಾರಿಗಳು,
ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಟಿ.ಕೆ.ಬಸವರಾಜ್,
ಇತರರು ಇದ್ದರು.
Back to top button
error: Content is protected !!