ಮಡಿಕೇರಿ ಆ 22 : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ವಿದ್ಯಾರ್ಥಿನಿ ನಿಲಯ ಅವರಣದಲ್ಲಿ ಅಸಭ್ಯವಾಗಿ ವರ್ತಿಸಿದ್ದ ಪ್ರಮುಖ ಆರೋಪಿ ಸೇರಿದಂತೆ ಆತನ ಸಂಗಡಿಗರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್ ಪಿ ಕೆ.ರಾಮರಾಜನ್, ಹಾಸ್ಟೆಲ್ ಬಳಿ ತೆರಳಿ ಅಸಭ್ಯವಾಗಿ ವರ್ತಿಸಿದ್ದ ಆರೋಪಿ ಆಟೋ ಚಾಲಕ ನೆಲ್ಲಿಹುದಿಕೇರಿ ನಿವಾಸಿ ಸಿಜಿಲ್(೨೫) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಮಡಿಕೇರಿ ನಿವಾಸಿಗಳಾದ ಸಿ.ಮನು(೨೭), ಎಸ್.ಪ್ರಶಾಂತ್(೨೭), ಕಿರಣ್ (28) ಎಂಬವರ ಮೇಲೆ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಮಡಿಕೇರಿ ಹೊರವಲಯದಲ್ಲಿನ ಮೆಡಿಕಲ್ ಕಾಲೇಜಿನಲ್ಲಿ ಪುಂಡರ ಹಾವಳಿ ಹೆಚ್ಚಾಗಿದ್ದು, ಕಳೆದ ಮೂರು ದಿನಗಳ ಹಿಂದೆ ವಿದ್ಯಾರ್ಥಿನಿಯರ ಹಾಸ್ಟೆಲ್ ಮುಂದೆ ಕಾಮುಕನೊಬ್ಬ ಅಶ್ಲೀಲ ವರ್ತನೆಯನ್ನು ತೋರಿದ್ದ. ಈ ದೃಶ್ಯ ಸಿಸಿ ಕ್ಯಾಮರದಲ್ಲೂ ಸೆರೆಯಾಗಿತ್ತು. ಈ ಸಂಬಂಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ದೂರು ಕೂಡ ಸಲ್ಲಿಸಿದ್ದರು.
ಈ ಹಿನ್ನಲೆಯಲ್ಲಿ ಕಾರ್ಯಪ್ರವೃತರಾದ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ.
ಶಾಲಾ-ಕಾಲೇಜು ಮತ್ತು ಹಾಸ್ಟೆಲ್ ಸಮೀಪ ಯಾವುದೇ ವ್ಯಕ್ತಿಗಳು ವಿದ್ಯಾರ್ಥಿಗಳಿಗೆ ತೊಂದರೆ ನೀಡುವುದು ಮತ್ತು ಅನುಚಿತವಾಗಿ ವರ್ತಿಸುವ ಘಟನೆಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ/ ತುರ್ತು ಸಹಾಯವಾಣಿ ೧೧೨ಗೆ ಕರೆ ಮಾಡಿ ಮಾಹಿತಿ ನೀಡಬಹುದು. ಕೆ.ಎಸ್.ಪಿ. ತಂತ್ರಾಶದ ಮೂಲಕ ಮಾಹಿತಿ ನೀಡುವಂತೆ ಹಾಗೂ ಅನಾಮಧೇಯ ಪತ್ರದ ಮೂಲಕ ಮಾಹಿತಿ ನೀಡಿ ಸಹಕರಿಸಬೇಕು. ಅಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದರು
Back to top button
error: Content is protected !!