ಕುಶಾಲನಗರ, ಫೆ 07: ಸುಮಾರು 30 ವರ್ಷಗಳಿಗೂ ಹೆಚ್ಚು ಕಾಲ ಗ್ರಾಮ ಪಂಚಾಯತ್ ನೀರು ಗಂಟಿಯಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಬಸವನಹಳ್ಳಿ ಗ್ರಾಮದ ಬೋಜಪ್ಪ ಹಾಗೂ ಗುಡ್ಡೆಹೊಸೂರು ಗ್ರಾಮದ ನಂಜಪ್ಪ ಇವರನ್ನು ಗುಡ್ಡೆಹೊಸೂರು ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ಇದೇ ಸಂದರ್ಭ ಮಾದ ಪಟ್ಟಣ ಗ್ರಾಮದಲ್ಲಿ ಆಶಾ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ರುಕ್ಮಿಣಿ ಅವರನ್ನು ಸಹ ಗ್ರಾಮ ಪಂಚಾಯತ್ ವತಿಯಿಂದ ಗೌರವಿಸಲಾಯಿತು.
ಸನ್ಮಾನಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸೌಮ್ಯರವರು ಭೋಜಪ್ಪ ಮತ್ತು ನಂಜಪ್ಪ ಇಬ್ಬರು ಸಹ ಮಂಡಲ ಪಂಚಾಯಿತಿ ಕಾಲದಿಂದಲೂ ಸಾರ್ವಜನಿಕ ಸೇವೆಯಲ್ಲಿ ತೊಡಗಿದ್ದು ಜನರಿಗೆ ಉತ್ತಮ ಸೇವೆಯನ್ನು ನೀಡಿದ್ದಾರೆ ಎಂಬುದಾಗಿ ಸೇವೆಯನ್ನು ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ ಕ್ರಮ ಪಂಚಾಯಿತಿ ಉಪಾಧ್ಯಕ್ಷರಾದ ಪ್ರವೀಣ್ ಕುಮಾರ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಮೇಶ್ ಆಡಳಿತ ಮಂಡಳಿ ಸದಸ್ಯರು ಹಾಗೂ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
Back to top button
error: Content is protected !!