ರಾಜಕೀಯ

ಹಲವು ಮುಖಂಡರು ಕಾಂಗ್ರೆಸ್ ಸೇರ್ಪಡೆಗೆ ಸಿದ್ದ: ಅಪರೇಷನ್ ಹಸ್ತ ಇಲ್ಲ.

ಮಡಿಕೇರಿ, ಆ 28 ವೀರ ಸೇನಾನಿ ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಆವರಣಕ್ಕೆ ಸ್ಥಳಾಂತರಿಸಲಾಗಿರುವ ಜನರಲ್ ತಿಮ್ಮಯ್ಯ ಅವರ ಪ್ರತಿಮೆಯನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಪರಿಶೀಲಿಸಿದರು. ಬಳಿಕ ಅಪಘಾತ ನಡೆದ ಪ್ರತಿಮೆ ಸ್ಥಾಪನೆಯಾಗಿದ್ದ ಜನರಲ್ ತಿಮ್ಮಯ್ಯ ವೃತ್ತಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಶಾಸಕ ಡಾ.ಮಂತರ್ ಗೌಡ ಸಚಿವರಿಗೆ ಅಗತ್ಯ ಮಾಹಿತಿ ಒದಗಿಸಿದರು. ಹಾಲಿ ಇರುವ ಪ್ರತಿಮೆಯನ್ನೇ ಅಗತ್ಯ ದುರಸ್ಥಿ‌ ನಡೆಸಿ ಪ್ರತಿಷ್ಠಾಪಿಸಲು‌ ಸಚಿವರು ತಿಳಿಸಿದರು.

 ಮೋದಿಯ ತಂತ್ರಗಾರಿಕೆ ಕರ್ನಾಟಕದಲ್ಲಿ ನಡೆಯುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್ ಭೋಸರಾಜು ತಿಳಿಸಿದರು.

ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೋಸರಾಜು, ಲೋಕಸಭಾ ಚುನಾವಣೆಗೆ ತಯಾರಿ ನಡೆಸಲಾಗುತ್ತಿದೆ. ರಾಷ್ಟ್ರೀಯ ನಾಯಕರು ಈಗಾಗಲೇ ಸಭೆ ಮಾಡಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಉಸ್ತುವಾರಿ ಸಚಿವರಿಗೆ ಜವಾಬ್ದಾರಿ ನೀಡಲಾಗಿದೆ. ಸಿದ್ದರಾಮಯ್ಯ, ಡಿಕೆಶಿ ಕೊಟ್ಟ ಮಾತನ್ನು ನಡೆಸಿದ್ದಾರೆ ಎಂದು ಹೇಳಿದರು.

ಆಪರೇಷನ್ ಹಸ್ತ ಪದ ಬಳಕೆ ನಾವು ಮಾಡಲ್ಲ, ಆಪರೇಷನ್ ಎಂಬ ಕೆಟ್ಟ ಶಬ್ದ ತಂದಿದ್ದು ಬಿಜೆಪಿ. ಹಲವು ರಾಜ್ಯಗಳಲ್ಲಿ ಬಿಜೆಪಿ ಆಪರೇಷನ್ ಕಮಲ ಮಾಡಿದೆ. ಪಕ್ಷ ಸೇರ್ಪಡೆಗೆ ಹಲವು ಹೊಸ ಹೊಸ ಮುಖಗಳ ಉತ್ಸುಕರಾಗಿದ್ದಾರೆ. ಕಲ್ಯಾಣ ಕರ್ನಾಟಕದಲ್ಲೂ ಹಲವರು ನನ್ನ ಸಂಪರ್ಕದಲ್ಲಿದ್ದಾರೆ. ಇಂತಿಷ್ಟೇ ಜನ ಬರುತ್ತಾರೆಂದು ಹೇಳಲಾಗದು ಎಂದ ಅವರು ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕನಿಲ್ಲದೆ ಅಧಿವೇಶನ ನಡೆದಿದೆ. ಇಂದಿಗೂ ಬಿಜೆಪಿ ಪರಿಸ್ಥಿತಿ ಬದಲಾಗಿಲ್ಲ ಎಂದು ವ್ಯಂಗ್ಯವಾಡಿದರು.

ಅನೇಕ ಜಿಲ್ಲೆಗಳಿಂದ ಶಾಸಕರು, ಮಾಜಿ ಶಾಸಕರು, ಪಕ್ಷದ ಪ್ರಮುಖರು ಕಾಂಗ್ರೆಸ್ ಸೇರ್ಪಡೆಯಾಗಲ್ಲಿದ್ದಾರೆ. ಅನೇಕ ನಾಯಕರು ಈಗಾಗಲೇ ಕಾಂಗ್ರೆಸ್ ಪಕ್ಷದ ಸಂಪರ್ಕದಲ್ಲಿದ್ದಾರೆ, ನಮ್ಮಲ್ಲಿ ಯಾವುದೇ ಆಪರೇಷನ್ ಹಸ್ತ ಎಂಬುದು ಇಲ್ಲ. ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿ ಅವರಾಗಿಯೇ ಬರುತ್ತಾರೆ. ಅಂತವರನ್ನು ಪಕ್ಷ ಬರಮಾಡಿಕೊಳ್ಳಲಿದೆ ಎಂದು ಹೇಳಿದರು.

ಈ ಸಂದರ್ಭ ಮಡಿಕೇರಿ ಶಾಸಕ ಡಾ. ಮಂತರ್ ಗೌಡ , ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಸೇರಿದಂತೆ ಪ್ರಮುಖರು ಹಾಜರಿದ್ದರು.

 

Related Articles

Leave a Reply

Your email address will not be published. Required fields are marked *

Back to top button
error: Content is protected !!