ಕುಶಾಲನಗರ ಆ 31: ಕೂಡುಮಂಗಳೂರು ಗ್ರಾಮ ಪಂಚಾಯತಿಯ ಮಾಸಿಕ ಸಭೆ ಗ್ರಾಪಂ ಅಧ್ಯಕ್ಷ ಭಾಸ್ಕರ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಗ್ರಾಮ ಪಂಚಾಯತಿಯ 15 ನೇ ಹಣಕಾಸು ಯೋಜನೆಯ ಅಡಿಯಲ್ಲಿ ಕೈಗೊಳ್ಳುವ ಕಾಮಗಾರಿಗಳ ಯೋಜನೆಗೆ ಸಂಬಂಧಿಸಿದಂತೆ ವಿವಿಧ ವಾರ್ಡ್‌ಗಳಲ್ಲಿ ಕಾಮಗಾರಿಗಳ ಕ್ರಿಯಾ ಯೋಜನೆಯ ಅಂದಾಜು ಪಟ್ಟಿಯನ್ನು ತಯಾರಿಸಲಾಯಿತು.
ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಸತಿರಹಿತರಿಗೆ ನಿವೇಶನಗಳನ್ನು ಹಂಚುವ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚೆಗಳು ನಡೆದವು. ಕಳೆದ ವರ್ಷಗಳಲ್ಲಿ ನಡೆದ ಕಾಮಗಾರಿಗಳ ಬಿಲ್ ವಿಲೇವಾರಿಗಳ ಬಗ್ಗೆ ಚರ್ಚಿಸಲಾಯಿತು. ಈಗಾಗಲೇ ವಸತಿ ರಹಿತರಿಗೆ ನಿವೇಶನಗಳನ್ನು ನೀಡಲು ಚಿಕ್ಕತ್ತೂರು ಗ್ರಾಮದಲ್ಲಿ ಜಾಗ ಕಾಯ್ದಿರಿಸಲಾಗಿದ್ದು, ಮುಂದಿನ ದಿನಗಳಲ್ಲಿ ಫಲಾನುಭವಿಗಳ ಅಯ್ಕೆಯನ್ನು ಕ್ರಮಬದ್ಧವಾಗಿ ನಡೆಸಿ ನಿಯಮಾನುಸಾರವಾಗಿ ಅರ್ಹ ಫಲಾನುಭವಿಗಳಿಗೆ ನೀಡುವ ಬಗ್ಗೆ ತೀರ್ಮಾನಿಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಗ್ರಾಪಂ ಅಧ್ಯಕ್ಷ ಭಾಸ್ಕರ್ ನಾಯಕ್ ಮಾತನಾಡಿ, ಸಭೆಯಲ್ಲಿ ನಡೆದ ಅಭಿವೃದ್ಧಿಗೆ ಪೂರಕವಾದ ಚರ್ಚೆಗಳ ಅನುಷ್ಠಾನಕ್ಕೆ ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುವುದು. ಎಲ್ಲಾ ವಾರ್ಡ್‌ಗಳಿಗೆ ಗ್ರಾಮ ಪಂಚಾಯತಿಯ ಅನುದಾನವನ್ನು ಕ್ರಮಬದ್ಧವಾಗಿ ವಿನಿಯೋಗ ಮಾಡಿ ಅಗತ್ಯವಾದ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. ಶುದ್ಧ ಕುಡಿಯುವ ನೀರಿನ ಘಟಕ ತೆರೆಯುವ ಬಗ್ಗೆ ಸ್ಥಳ ಪರಿಶೀಲನೆ ನಡೆಸಲಾಗುವುದು ಗ್ರಾಮ ಪಂಚಾಯತಿ ನೂತನ ಕಟ್ಟಡ ನಿರ್ಮಾಣ ಮಾಡುವ ಬಗ್ಗೆ ಜಾಗವನ್ನು ಗುರುತಿಸುವ ಪ್ರಕ್ರಿಯೆ ಆರಂಭಿಸಲಾಗುವುದು ಎಂದರು.
ಸಭೆಯಲ್ಲಿ ಅಭಿವೃದ್ಧಿ ಅಧಿಕಾರಿ ಸಂತೋಷ, ಸರಕಾರದ ಹೊಸ ಹೊಸ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಸಭೆಗೆ ಬಂದ ಅರ್ಜಿಗಳ ವಿಲೇವಾರಿ ಮಾಡುವ ವಿಷಯವನ್ನು ಪ್ರಸ್ತಾವನೆ ಮಾಡಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಶಶಿಕಲಾ, ಲೆಕ್ಕ ಸಹಾಯಕ ಮಮತ ಸೇರಿದಂತೆ ಸರ್ವ ಸದಸ್ಯರು, ಹಾಜರಿದ್ದರು.
Back to top button
error: Content is protected !!