ಪ್ರತಿಭಟನೆ

ಕೇಂದ್ರ ಸರಕಾರದ ವಿರುದ್ದ ಸಿಪಿಐ ಎಂ ಪ್ರತಿಭಟನೆ

ಕುಶಾಲನಗರ ಸೆ 4 : ಕೇಂದ್ರ ಸರಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಸಿಪಿಐ ಎಂ ಸಂಘಟನೆ ಆಶ್ರಯದಲ್ಲಿ ಕುಶಾಲನಗರದಲ್ಲಿ ಪ್ರತಿಭಟನೆ ನಡೆಯಿತು.
ಕುಶಾಲನಗರ ತಾಲೂಕು ತಹಸೀಲ್ದಾರ್ ಕಛೇರಿ ಮುಂಭಾಗ ಪ್ರತಿಭಟಿಸಿದ ಸಂಘಟನೆ ಸದಸ್ಯರು, ಮೋದಿ‌ ಹಾಗೂ ಕೇಂದ್ರ ಸರಕಾರದ ವಿರುದ್ದ ಧಿಕ್ಕಾರ ಕೂಗಿ ಆಕ್ರೋಷ ವ್ಯಕ್ತಪಡಿಸಿದರು.
ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿ ಸಿಪಿಐ ಎಂ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಚ್.ಬಿ.ರಮೇಶ್ ಮಾತನಾಡಿ, ಕೇಂದ್ರ ಸರಕಾರ ರೈತರು ಮತ್ತು ಕಾರ್ಮಿಕ ವರ್ಗವನ್ನು ಶೋಷಣೆ ಮಾಡುತ್ತಿದೆ. ಚುನಾವಣಾ ಪೂರ್ವ ಆಶ್ವಾಸನೆಗಳು ಈಡೇರಿಸಿಲ್ಲ. ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸುತ್ತಿದ್ದಾರೆ. ದೇಶದ ಆರ್ಥಿಕತೆ ಕುಸಿಯುತ್ತಿದೆ. ಸರಕಾರಿ ಆಸ್ತಿಗಳನ್ನು ಖಾಸಗೀಕರಣಗೊಳಿಸುವ ಮೂಲಕ ದೇಶವನ್ನು ದಿವಾಳಿಯತ್ತ ಕೊಂಡೊಯ್ಯುತ್ತಿದೆ ಎಂದು ಆರೋಪಿಸಿದರು. ಮೋದಿ ನೇತೃತ್ವದ ಎನ್.ಡಿ.ಎ.ಸರಕಾರದ
ಈ ಎಲ್ಲಾ ವೈಫಲ್ಯಗಳ ವಿರುದ್ದ ಸಿಪಿಐಎಂ ಕೇಂದ್ರ ಸಮಿತಿ ಸೂಚನೆಯಂತೆ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ವಿವಿಧ ಹಕ್ಕೊತ್ತಾಯಗಳ ಈಡೇರಿಕೆಗೆ ಆಗ್ರಹಿಸಿ ತಹಸೀಲ್ದಾರ್ ಕಛೇರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭ ಸಂಘಟನೆ ಪ್ರಮುಖರಾದ ಶಿವಪ್ಪ, ಪಿ.ಆರ್.ಭರತ್, ಶಿವರಾಂ, ಚಂದ್ರನ್, ಮೋನಪ್ಪ, ಶಿವಪ್ಪ ನಾಯಕ್, ಮುಸ್ತಾಫ, ಉದಯ ಮತ್ತಿತರರು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!