ಸನ್ಮಾನ

ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ಡಾ.ಮಂತರ್ ಗೌಡ

ಕುಶಾಲನಗರ ಸೆ 5: ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ನೀಡಿ ಸಮಾಜದಲ್ಲಿ ಉತ್ತಮ ಪ್ರಜೆಗಳನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾಗಿದೆ. ಆ ನಿಟ್ಟಿನಲ್ಲಿ ಶಿಕ್ಷಕ ವೃತ್ತಿಗೆ ತನ್ನದೇ ಆದ ಗೌರವ ಸ್ಥಾನವಿದೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ತಿಳಿಸಿದ್ದಾರೆ.
ನಗರದ ಕೊಡಗು ಗೌಡ ಸಮಾಜದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ನಡೆದ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಶಿಕ್ಷಕರ ಸೇವೆಯನ್ನು ಯಾರೂ ಸಹ ಮರೆಯುವುದಿಲ್ಲ. ಪುಸ್ತಕ ಮೂಲಕ ಪಾಠ ಮಾಡುವುದಕ್ಕೂ, ಮನಸ್ಸಿನ ಮೂಲಕ ಪಾಠ ಮಾಡುವುದಕ್ಕೂ ಬಹಳ ವ್ಯತ್ಯಾಸವಿದೆ. ಆ ನಿಟ್ಟಿನಲ್ಲಿ ಮಕ್ಕಳ ಜ್ಞಾನಾರ್ಜನೆ ಹೆಚ್ಚಿಸುವಲ್ಲಿ ಶಿಕ್ಷಕರ ಸೇವೆ ಮಹತ್ವದ್ದಾಗಿದೆ.
ಶಿಕ್ಷಕರು ಹಲವು ಮೂಲ ಸೌಲಭ್ಯಗಳ ಕೊರತೆಯ ನಡುವೆಯೂ ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ಕಲಿಸಲು ಪ್ರಯತ್ನಿಸುತ್ತಾರೆ.

ಕೊಡಗು ಜಿಲ್ಲೆ ಶೈಕ್ಷಣಿಕವಾಗಿ ಮುಂದೆ ಇದೆ. ಆ ನಿಟ್ಟಿನಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿಯೂ ಸಹ ಇನ್ನಷ್ಟು ಉನ್ನತ ಸ್ಥಾನ ಪಡೆಯುವಂತಾಗಬೇಕು ಎಂದು ಹೇಳಿದರು.
ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ ಅವರು ಮಾತನಾಡಿ, ಶಿಕ್ಷಕರು ಮಕ್ಕಳಿಗೆ ದಾರಿದೀಪವಾಗಿದ್ದಾರೆ. ಮಕ್ಕಳಿಗೆ ತಾಳ್ಮೆ, ಸಹನೆ ಕಲಿಸಿ, ಅಕ್ಷರ ಅಭ್ಯಾಸ ಮಾಡಿಸುತ್ತಾರೆ ಎಂದು ಹೇಳಿದರು.

ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಮಾತನಾಡಿ, ಶಿಕ್ಷಕರೇ ದೇವರಾಗಿದ್ದು, ಶಿಕ್ಷಕರನ್ನು ಸದಾ ಗೌರವಿಸುತ್ತೇವೆ. ಎಲ್ಲಾ ಮಕ್ಕಳನ್ನು ಪ್ರೀತಿ, ಗೌರವದಿಂದ ಕಾಣುತ್ತಾರೆ ಎಂದರು.

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹಕಾರ್ಯದರ್ಶಿ ಎಚ್.ಎಸ್.ಚೇತನ್ ಅವರು ಮಾತನಾಡಿ, ಶಿಕ್ಷಕರ ದಿನಾಚರಣೆ ಸಂಘಟನೆಗೆ ಮುಂದಿನ ದಿನಗಳಲ್ಲಿ ಧತ್ತಿನಿಧಿ ಸ್ಥಾಪಿಸಲಾಗುವುದು.
ಹೊಸ ಪಿಂಚಣಿ ಯೋಜನೆ(ಎನ್‍ಪಿಎಸ್) ಶಿಕ್ಷಕರ ಸಮಸ್ಯೆಯನ್ನು ಪರಿಹರಿಸಲು ಶಿಕ್ಷಕರ ಸಂಘವು ನಿರಂತರ ಪ್ರಯತ್ನ ನಡೆಸುತ್ತಿದೆ ಎಂದು ಹೇಳಿದರು.
ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. ಹಾಗೆಯೇ ನಿವೃತ್ತ ಶಿಕ್ಷಕರನ್ನು ಗೌರವಿಸಲಾಯಿತು.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಸ್.ಎ.ಯೋಗೇಶ್, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ವಿಭಾಗೀಯ ಉಪಾಧ್ಯಕ್ಷ ಪಿ.ನವೀನ್ ಕುಮಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಸೌಮ್ಯ ಪೊನ್ನಪ್ಪ, ಕೂಡಿಗೆಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪ ನಿರ್ದೇಶಕ ಎಂ.ಚಂದ್ರಕಾಂತ್, ಪ್ರಮುಖರಾದ ಕೆ.ಕೆ.ಮಂಜುನಾಥ್ ಕುಮಾರ್, ಡಿವೈಪಿಸಿ ಎಂ.ಕೃಷ್ಣಪ್ಪ, ಜಿಲ್ಲಾ ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಪಿ.ಗುರುರಾಜ್, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸೋಮಶೇಖರ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಎನ್.ಮಂಜುನಾಥ್, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸದಾಶಿವ ಪಲ್ಲೇದ್, ಜಿಲ್ಲಾ ಅನುದಾನಿತ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಭುಕುಮಾರ್, ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಕೆ.ಕುಮಾರ್, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಪ್ರವೀಣ್ ಪಿ.ಎ., ಜಿಲ್ಲಾ ವೃತ್ತಿ ಶಿಕ್ಷಕರ ಸಂಘದ ಅಧ್ಯಕ್ಷ ಸೋಮಯ್ಯ, ಎಸ್‍ಸಿಎಸ್‍ಟಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷೆ ಪಾರ್ವತಿ, ತಾಲ್ಲೂಕು ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಸುಕ್ರುದೇವುಗೌಡ, ಜಿ.ಎಂ.ಹೇಮಂತ್, ಪ್ರೌಢಶಾಲಾ ಸಹಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ರವಿಕೃಷ್ಣ ಪಿ.ಎಸ್., ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮೋಹನ್ ಪೆರಾಜೆ, ಅನುದಾನಿತ ಪ್ರೌಢಶಾಲಾ ಮತ್ತು ಕಾಲೇಜು ನೌಕರರ ಸಂಘದ ಅಧ್ಯಕ್ಷ ಶಿವಪ್ರಸಾದ್, ದೈಹಿಕ ಶಿಕ್ಷಕ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಕಿರಣ್ ಪಿ.ಎಂ., ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ತಾಲ್ಲೂಕು ಅಧ್ಯಕ್ಷ ಅಶೋಕ್ ಕೆ.ಜಿ., ಇತರರು ಇದ್ದರು.

ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಗೊಂಡ ಶಿಕ್ಷಕರ ವಿವರ

ಪ್ರಸಕ್ತ (2023-24) ಸಾಲಿನಲ್ಲಿ ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಮಡಿಕೇರಿ ತಾಲ್ಲೂಕಿನ ದೇವರಕೊಲ್ಲಿ ಸ.ಕ.ಪ್ರಾ.ಶಾಲೆಯ ಸಹ ಶಿಕ್ಷಕರಾದ ಬಿ.ಸಿ.ವನಜ, ನಾಪೋಕ್ಲು ಕೆಪಿಎಸ್ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಕೆ.ಪಿ.ಚಂದ್ರಕಲಾ, ಚೆಂಬು ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕರಾದ ಪಿ.ಎಸ್.ಕಾಮಾಕ್ಷಿ, ಸೋಮವಾರಪೇಟೆ ತಾಲ್ಲೂಕಿನ ಹಟ್ಟಿಹೊಳೆ ಸ.ಕಿ.ಪ್ರಾ.ಶಾಲೆಯ ಸಹ ಶಿಕ್ಷಕರಾದ ಶಾಂತಶೀಲ, ರಂಗಸಮುದ್ರ ಸ.ಹಿ.ಪ್ರಾ.ಶಾಲೆಯ ಸಹ ಶಿಕ್ಷಕರಾದ ಕೆ.ಕೆ.ಸುನಿತ, ಕೂಡುಮಂಗಳೂರು ಸ.ಪ್ರೌಢ ಶಾಲೆಯ ಹಿಂದಿ ಭಾಷಾ ಶಿಕ್ಷಕರಾದ ಎಂ.ಟಿ.ದಯಾನಂದ ಪ್ರಕಾಶ್, ವಿರಾಜಪೇಟೆ ತಾಲ್ಲೂಕಿನ ಎಲಿಯಂಗಾಡು ಸ.ಕಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕರಾದ ಪಿ.ಎಂ.ಸುಬ್ರಮಣ್ಯ, ಗೋಣಿಕೊಪ್ಪ ಸ.ಮಾ.ಪ್ರಾ.ಶಾಲೆಯ ಮುಖ್ಯ ಶಿಕ್ಷಕರಾದ ಎಚ್.ಕೆ.ಕುಮಾರ್, ಜೆಪಿಎಸ್ ಪ್ರೌಢಶಾಲೆಯ(ಅನುದಾನಿತ) ಮುಖ್ಯ ಶಿಕ್ಷಕರಾದ ಲಾಲ್‍ಕುಮಾರ್ ಅವರು ಆಯ್ಕೆಯಾಗಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!