ಧಾರ್ಮಿಕ

ಕೌಟುಂಬಿಕ ಸೌಹಾರ್ದತೆ, ಗ್ರಾಮ ಸುಭೀಕ್ಷೆಗಾಗಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ.

ಕುಶಾಲನಗರ ಸೆ 8: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್‌ ಕೊಡ್ಲಿಪೇಟೆ ವಲಯ,ಸೋಮವಾರಪೇಟೆ ತಾಲ್ಲೂಕು,ಸಾಮೂಹಿಕ ಶ್ರೀ ವರಲಕ್ಷ್ಮಿ ಪೂಜಾ ಸಮಿತಿ ಹಾಗೂ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಕಿರಿಕೊಡ್ಲಿ ಭದ್ರಮ್ಮ ಮಹಾಂತಪ್ಪ ಕಲ್ಯಾಣ ಮಂಟಪದಲ್ಲಿ ಕೌಟುಂಬಿಕ ಸೌಹಾರ್ದತೆ ಹಾಗೂ ಗ್ರಾಮ ಸುಭೀಕ್ಷೆಗಾಗಿ ವಲಯ ಮಟ್ಟದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮ ನಡೆಯಿತು.

ಕೊಡ್ಲಿಪೇಟೆ ವೀರಭದ್ರ ದೇವಾಲಯ ಅರ್ಚಕರಾದ
ರಮೇಶ್ ಹಿರೇಮಠ ಅವರ ನೇತೃತ್ವದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜಾ ಕೈಂಕಾರ್ಯ ಶ್ರದ್ಧಾಭಕ್ತಿಯಿಂದ ನಡೆಯಿತು. ಕೊಡ್ಲಿಪೇಟೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ್ದ‌ ಮಹಿಳೆಯರು ವಿಶೇಷ ಪೂಜೆ ಹಾಗೂ ಆರತಿ ನೆರವೇರಿಸಿ ಭಕ್ತಿ ಸಮರ್ಪಿಸಿದರು.
ನಂತರ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಕಿಡಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಉದ್ಘಾಟಿಸಿ ಮಾತನಾಡಿ,ಸ್ವಸಹಾಯ ಸಂಘಗಳಿಂದ ಮಹಿಳೆಯರಿಗೆ ಉತ್ತಮ ಅನುಕೂಲಗಳು ಆಗುತ್ತಿವೆ.ಈ ಸೌಲಭ್ಯಗಳ ಸದಾವಕಾಶ ಮಾಡಿಕೊಳ್ಳುವಂತೆ ಸಲಹೆ ನೀಡಿದರು.
ಧರ್ಮಸ್ಥಳ ಯೋಜನೆಗಳು ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸುವುದರ ಜೊತೆ ಧರ್ಮದ ತಳಹದಿಯ ಬದುಕನ್ನು ಕಟ್ಟಿಕೊಡುತ್ತಿದೆ.ಸರ್ಕಾರ ಮಾಡದ ಅನೇಕ ಯೋಜನೆಗಳನ್ನು ಧರ್ಮಸ್ಥಳ ಯೋಜನೆ ಮೂಲಕ ಅನುಷ್ಠಾನ ಮಾಡಲಾಗುತ್ತಿದೆ.ಇಡೀ ರಾಜ್ಯದ 32 ಜಿಲೆಗಳಲ್ಲೂ ಇಂತಹ ಕಾರ್ಯಕ್ರಮಗಳನ್ನು ಕೈಗೊಂಡು ಜನಜಾಗೃತಿ ಮೂಡಿಸುವುದರ ಜೊತೆಗೆ ಅಸಹಾಯಕರಿಗೆ ಸಹಾಯ ಹಸ್ತ ಚಾಚುವ ಮೂಲಕ ಅವರ ಬದುಕನ್ನು ಹಸನಗೊಳಿಸಲಾಗುತ್ತಿದೆ.ಶೌಚಾಲಯದಿಂದ ಹಿಡಿದು ದೇವಾಲಯವರೆಗೂ ಧನ ಸಹಾಯವನ್ನು ಮಾಡುವ‌ ಮೂಲಕ ಒಬ್ಬ ಬಡವ ಶೌಚಾಲಯ,ಮನೆ ಕಟ್ಟಿಕೊಳ್ಳುತ್ತೇನೆ ಎಂದರೆ ಅನಾರೋಗ್ಯ ಪೀಡಿತ ವ್ಯಕ್ತಿಗೂ ಆರ್ಥಿಕ ನೆರವು ನೀಡುತ್ತಿರುವುದು ಶ್ಲಾಘನೀಯ ಕಾರ್ಯ ಎಂದರು.
ಕೊಡ್ಲಿಪೇಟೆ ಶಿಲ್ಪಿ ವರಪ್ರಸಾದ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ಮೂಲಕ ಧರ್ಮದ ಬಗ್ಗೆ ಜನಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ ಎಂದರು.ಜೊತೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಫಲಾನುಭವಿಗಳಿಗೆ ಯೋಜನೆಯ ವಿವಿಧ ಕಾರ್ಯಕ್ರಮದ ಅಡಿಯಲ್ಲಿ ಮಂಜೂರಾದ ಮಂಜೂರಾತಿ ಪತ್ರ ಹಾಗೂ ಚೆಕ್‌ ಗಳನ್ನು ವಿತರಣೆ ಮಾಡಿದರು.
ಧರ್ಮಸ್ಥಳ ಯೋಜನೆ ಯೋಜನಾಧಿಕಾರಿ ಎಚ್.ರೋಹಿತ್
ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಅನೇಕ ಕಾರ್ಯಕ್ರಮಗಳಿವೆ.ಈ ಎಲ್ಲಾ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಬಡ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ವಿದ್ಯಾರ್ಥಿ ವೇತನ ಸೌಲಭ್ಯ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಜನರಿಗೆ ಸಹಾಯ ಧನ ವಿತರಣೆ ಹಾಗೂ ಮಹಿಳೆಯರು ಸ್ಚ ಉದ್ಯೋಗ ಕೈಗೊಳ್ಳಲು ಆರ್ಥಿಕ ನೆರವು ಮತ್ತು ಹೈನುಗಾರಿಕೆಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದರು.
ಮಹಿಳೆಯರು ದುಡಿಯುವ ವೇಳೆಯಲ್ಲಿ ಮುಂದಿನ ಭವಿಷ್ಯದ ಹಿತದೃಷ್ಟಿಯಿಂದ ಅಲ್ಪಸಲ್ಪ ಹಣವನ್ನು
ಉಳಿತಾಯ ಮಾಡುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು.ಜೊತೆಗೆ ಜೀವವಿಮಾ ಪಾಲಿಸಿಗಳನ್ನು ಮಾಡಿಸುವುದರಿಂದ ಜೀವನಕ್ಕೆ ಭದ್ರತೆ ಸಿಗುತ್ತದೆ ಎಂದರು.
ಸಮಾಜದ ಒಳಿತಿಗಾಗಿ ಧಾರ್ಮಿಕ ಆಚರಣೆಗಳು ಅಗತ್ಯ,
ದುಡ್ಡಿನಿಂದ ನೆಮ್ಮದಿ ಸಿಗುವುದಿಲ್ಲ ಇಂತಹ ಕಾರ್ಯಕ್ರಮಗಳ ಮೂಲಕ ಶಾಂತಿ,ನೆಮ್ಮದಿ ಸಿಗುತ್ತದೆ ಎಂದು ಹೇಳಿದರು.
ಜಿಲ್ಲಾ ಜನಜಾಗೃತಿ ಸಮಿತಿ ವೇದಿಕೆ ಸದಸ್ಯ ಭಗವಾನ್ ಮಾತನಾಡಿ, ಪ್ರತಿಯೊಬ್ಬರೂ ತಮ್ಮ ಆಚಾರ, ವಿಚಾರ,ಸಂಸ್ಕೃತಿ,ಪರಂಪರೆಯನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕು.ಧಾರ್ಮಿಕ ಕೇಂದ್ರಗಳು ಇಂದು ರಾಜಕೀಯ ಶಕ್ತಿ ಕೇಂದ್ರಗಳಾಗಿ ಪರಿವರ್ತನೆ ಆಗುತ್ತಿರುವುದು ದುರದೃಷ್ಟಕರ ಎಂದ ಅವರು ಸನಾತನ ಧರ್ಮದ ಬಗ್ಗೆ ಅಪಪ್ರಚಾರ ಖಂಡನೀಯ ಎಂದರು.
ಈ ಸಂದರ್ಭ ಕೊಡ್ಲಿಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ತ್ಯಾಗರಾಜು, ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಹನೀಫ್,ಬೆಸೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಕಮಲಮ್ಮ ಪಾಪೇಗೌಡ,ಹಂಡ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನಿರಂಜನ್,ಸಾಮೂಹಿಕ ವರಮಹಾಲಕ್ಷ್ಮಿ ಪೂಜಾ ಸಮಿತಿ ಅಧ್ಯಕ್ಷ ಬಿ.ವಿ.ನಾಗರಾಜು,ಕೊಡ್ಲಿಪೇಟೆ ಒಕ್ಕೂಟದ ಉಪಾಧ್ಯಕ್ಷ ಎ.ಎನ್.ಪಂಕಜ ಪ್ರಕಾಶ್, ಕಾರ್ಯದರ್ಶಿ ನಾಗರಾಜು, ಸಹ ಕಾರ್ಯದರ್ಶಿ ಕಲಾವತಿ,ಮಲ್ಲಿಕಾರ್ಜುನ ಬೆಳ್ಳಾರಳ್ಳಿ,ಕೋಶಾಧಿಕಾರಿ ಎ.ಎಸ್.ಮಹೇಶ್ ಬ್ಯಾಡಗೊಟ್ಟ,ಸದಸ್ಯರಾದ ಬೆಸೂರು ಸುನಂದ ಸುಬ್ಬಯ್ಯ,ಆಶಾ ಸುಂದರ್,ಕೊಡ್ಲಿಪೇಟೆ ಮಮತಾಸುಧೀರ್, ಲೋಲಾಕ್ಷಿ ಧರ್ಮಪ್ಪ, ಕಿರಿಕೊಡ್ಲಿ ಭಾನುಮತಿಮಂಜುನಾಥ್,ಹುಲುಕೋಡು ಸಂಪತ್,ಹಿಪ್ಪಲಿ ಯೋಗೇಶ್ ,ಧರ್ಮಸ್ಥಳ ಯೋಜನೆಯ ವಲಯ ಮೇಲ್ವಿಚಾರಕ ನಾಗರಾಜು ಮತ್ತಿತರರು ಇದ್ದರು. ಪ್ರಂಕಜ ಪ್ರಕಾಶ್ ಸ್ವಾಗತಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!