ಕುಶಾಲನಗರ ಸೆ 10: ಕಾರು ಹಾಗೂ KSRTC ಬಸ್ ನಡುವೆ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಪ್ರವಾಸಿಗರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಕೊಡಗು ಜಿಲ್ಲೆ ಮಡಿಕೇರಿ ಹೊರವಲಯದ ಚೈನ್ ಗೇಟ್ ಬಳಿ ನಡೆದಿದೆ.
ಮಡಿಕೇರಿ ಕಡೆಯಿಂದ ಹಾಸನಾಗೆ ತೆರಳುತ್ತಿದ್ದ KSRTC ಬಸ್ ಹಾಗೂ ಕುಶಾಲನಗರ ಕಡೆಯಂದ ಮಡಿಕೇರಿ ಕಡೆಗೆ ಬರುತ್ತಿದ್ದ ಪ್ರವಾಸಿಗರ ಶೀಫ್ಟ್ ಕಾರಿಗೆ ಮುಖಾಮುಖಿ ಡಿಕ್ಕಿಯಾಗಿದೆ. ಬಸ್ ಚಾಲಕನ ಅಜಾಗರುಕತೆಯ ಚಾಲನೆಯೆ ಅಪಘಾತಕ್ಕೆ ಕಾರಣ ಅಂತ ಸ್ಥಳೀಯರು ಆಕ್ರೋಶ ಹೊರಹಾಕಿದ್ರು. ಅಪಘಾತದಲ್ಲಿ ಕಾರು ಸಂಪೂರ್ಣ ಹಾನಿಯಾಗಿದೆ. ಆದ್ರೆ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದು ಗಾಯಗೊಂಡವರಿಗೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆ ಚಿಕಿತ್ಸೆ ನೀಡಲಾಯಿತು. ಈ ಅಪಘಾತ ನಡೆಯವುದಕ್ಕೂ ಮೊದಲು ಮಡಿಕೇರಿ ಬಸ್ ಸ್ಟಾಂಡ್ ಬಳಿಯೇ ಕಾರ್ ಒಂದಕ್ಕೆ ಬಸ್ ತಾಗಿಸಿಕೊಂಡು ಹೊಗಿತ್ತು ಎನ್ನಲಾಗುತ್ತಿದೆ.
ಸದ್ಯ ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದ್ದು ಸ್ಥಳಕ್ಕೆ ಮಡಿಕೇರಿ ಸಂಚಾರಿ ಪೊಲೀಸರು ಭೇಟಿ ನೀಡಿ ಟ್ರಾಫಿಕ್ ಕ್ಲೀಯರ್ ಮಾಡುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಕೊಡಗು ಜಿಲ್ಲೆಯಲ್ಲಿ KSRTC. ಬಸ್ ಗಳ ಬೆಜವಬ್ದಾರಿಯುತ್ತ ಚಾಲನೆ ವಿರುದ್ದ ಸ್ಥಳೀಯರು ಆಕ್ರೋಶಗೊಂಡಿದ್ದು , ಇದಕ್ಕೆ ಬ್ರೇಕ್ ಹಾಕುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
Back to top button
error: Content is protected !!