ಶಿಕ್ಷಣ

ಕೊಡಗು ವಿವಿ ರದ್ದತಿ‌ ಪ್ರಶ್ನೆಯೇ ಇಲ್ಲ: ಶಾಸಕ ಡಾ.ಮಂಥರ್ ಗೌಡ ಸ್ಪಷ್ಟನೆ

ಕುಶಾಲನಗರದ ಬಾಲಕಿಯರ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಸಸ್ಯ ಶ್ಯಾಮಲಾ ಕಾರ್ಯಕ್ರಮ

ಕುಶಾಲನಗರ, ಸೆ 12: ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಅರಿವು ಮೂಡಿಸುವ ಕೆಲಸ ಕಡ್ಡಾಯವಾಗಿ ಮಾಡಬೇಕಿದೆ. ಪರಿಸರ,ಗಿಡ ಮರದ ಬಗ್ಗೆ ಪ್ರೀತಿ ಮೂಡುವಂತೆ ಮಾಡಬೇಕು ಎಂದು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಹೇಳಿದರು.
ಕೊಡಗು ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಸೋಮವಾರಪೇಟೆ ತಾಲ್ಲೂಕು ಹಾಗೂ ಅರಣ್ಯ ಇಲಾಖೆ ಸಂಯುಕ್ತಾಶ್ರಯದಲ್ಲಿ ಕುಶಾಲನಗರದ ಬಾಲಕಿಯರ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಏರ್ಪಡಿಸಿದ್ದ ಸಸ್ಯ ಶ್ಯಾಮಲಾ ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಹಾಗೂ ವಿದ್ಯಾರ್ಥಿಗಳಿಗೆ ಗಿಡಗಳನ್ನು ದತ್ತು ನೀಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಇಂದು ನಮ್ಮ ಪರಿಸರದಲ್ಲಿ ಮರಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಅರಣ್ಯ ಪ್ರದೇಶದಲ್ಲಿ ಬ್ರಿಟಿಷ್ ಕಾಲದ ಮಾದರಿಯಲ್ಲಿ ತೇಗ ಪ್ಲಾಂಟೇಷನ್ ಮಾಡಿಕೊಂಡು ಬಂದಿದ್ದಾರೆ. ಅರಣ್ಯದಿಂದ ಆರ್ಥಿಕ ಸಂಪತ್ತು ಹೆಚ್ಚಳ ಮಾಡುವ ಉದ್ದೇಶದಿಂದ ಬೆಲೆಬಾಳುವ ಮರಗಳನ್ನು ಬೆಳೆಸುತ್ತಾ ಬಂದಿದ್ದು,ಈ ಬಗ್ಗೆ ಕಾನೂನಿನಲ್ಲಿ ತಿದ್ದುಪಡಿ ಅಗತ್ಯವಾಗಿದೆ. ಅರಣ್ಯದಲ್ಲಿ
ಆಹಾರ ಕೊರತೆಯಿಂದ ಆನೆ‌ಮಾನವ ಸಂಘರ್ಷ ಹೆಚ್ಚುತ್ತಿದೆ.
ಅರಣ್ಯದಲ್ಲಿ ಕೆಲವು ಮರಗಳನ್ನು ತೆಗೆದು ಕಾರಿಡಾರ್ ಮಾದರಿಯಲ್ಲಿ ಬಿದಿರು, ಮಾವು,ಹಲಸು,ಬಾಳೆ ಸೇರಿದಂತೆ ಹಣ್ಣಿನ ಮರಗಳನ್ನು ಬೆಳೆಸಬೇಕು. ಜೊತೆಗೆ ಕೆರೆಗಳನ್ನು ನಿರ್ಮಾಣ ಮಾಡಬೇಕಾಗಿದೆ.
ಜಿಲ್ಲೆಯ ಪ್ರವಾಸಿ ತಾಣಗಳ ಪೈಕಿ ಕೆಲವು ಕಡೆ ಪ್ರವಾಸೋದ್ಯಮ ಅಭಿವೃದ್ಧಿ ಹೆಸರಿನಲ್ಲಿ ಅವೈಜ್ಞಾನಿಕ ಕಾಮಗಾರಿಗಳು ನಡೆದಿವೆ.
ಕಾನೂನು ಬಾಹಿರವಾಗಿ ರೆಸಾರ್ಟ್ಸ್ ಗಳು, ಹೋಂ ಸ್ಟೇ ನಿರ್ಮಾಣ ಹಾಗೂ ಅರಣ್ಯ ಪ್ರದೇಶ ಒತ್ತುವರಿ ಕೂಡ ನಡೆದಿದೆ. ಪರಿಸರ ಸ್ನೇಹಿ ಪ್ರವಾಸೋದ್ಯಮಕ್ಕೆ ನಮ್ಮ ಅವಧಿಯಲ್ಲಿ ಒತ್ತು‌ ನೀಡಲಾಗುವುದು ಎಂದರು.
ಕೊಡಗು ವಿವಿ ರದ್ದತಿ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ವಿವಿಯನ್ನು ರದ್ದುಗೊಳಿಸಲು ಯಾವುದೇ ಪ್ರಯತ್ನ ಸರಕಾರದ ಮುಂದಿಲ್ಲ. ಇದು ಬಿಜೆಪಿಗರ ಆರೋಪವಷ್ಟೇ. ನೂರು ದಿನಗಳಲ್ಲಿ ಕಾಂಗ್ರೆಸ್ ಸರಕಾರ ನುಡಿದಂತೆ ಎಲ್ಲಾ 5 ಉಚಿತ ಯೋಜನೆಗಳನ್ನು ಜಾರಿಗೆ ತಂದಿರುವುದನ್ನು ಸಹಿಸಲಾರದೆ ಅಪಪ್ರಚಾರದಲ್ಲಿ ತೊಡಗಿದ್ದಾರೆ.‌ಕೊಡಗು ವಿವಿಯನ್ನು ಹಂತಹಂತವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದರು.
ಸೋಮವಾರಪೇಟೆ ತಾಲ್ಲೂಕು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ವಿ.ಮಂಜೇಶ್ ಮಾತನಾಡಿ, ಅರಣ್ಯ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಸಹಭಾಗಿತ್ವದಲ್ಲಿ ಸಸ್ಯ ಶ್ಯಾಮಲಾ ಕಾರ್ಯಕ್ರಮದಡಿಯಲ್ಲಿ ಶಾಲಾ,ಕಾಲೇಜು ಆವರಣದಲ್ಲಿ ಸಸಿಗಳನ್ನು ನೀಡಲಾಗುತ್ತಿದೆ. ಈ ಸಸಿಗಳನ್ನು ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಚನ್ನಾಗಿ ಪೋಷಿಸುವ ಮೂಲಕ ಒಳ್ಳೆಯ ಪರಿಸರ ನಿರ್ಮಾಣಕ್ಕೆ ಕಾರಣರಾಗಬೇಕು ಎಂದರು.

ಈ ಸಂದರ್ಭ ಪುರಸಭೆ ಸದಸ್ಯರಾದ ಪ್ರಮೋದ್ ಮುತ್ತಪ್ಪ,ಖಲ್ಲಿಮುಲ್ಲಾ,ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಬಿ.ಎನ್. ಪುಷ್ಪಾ,ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಎಸ್.ಎನ್. ಲೋಕೇಶ್,ಮುಖಂಡರಾದ ಶಿವಶಂಕರ್,ಶಿಕ್ಷಕರಾದ ಎಂ.ತುಳಾಸಿ,ಶಿವಣ್ಣ, ರಶ್ಮಿ,ಸುಪ್ರಭಾ ಇದ್ದರು.

 

Related Articles

Leave a Reply

Your email address will not be published. Required fields are marked *

Back to top button
error: Content is protected !!