ಕುಶಾಲನಗರ, ಸೆ 13: ಶಾಲಾ ಶಿಕ್ಷಣ ಇಲಾಖೆ, ಕುಶಾಲನಗರ ಸಮೂಹ ಸಂಪನ್ಮೂಲ ಕೇಂದ್ರದ ಆಶ್ರಯದಲ್ಲಿ ಕುಶಾಲನಗರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಕುಶಾಲನಗರದ ಫಾತಿಮಾ ಕಾನ್ವೆಂಟ್ ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಜಿಪಂ ಮಾಜಿ ಸದಸ್ಯ ವಿ.ಪಿ.ಶಶಿಧರ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ವಿದ್ಯಾರ್ಥಿಗಳು ಸೋಲು ಗೆಲುವನ್ನು ಪರಿಗಣಿಸದೆ ಸ್ಪರ್ಧೆಯಲ್ಲಿ ಪಾಲ್ಗೊಳ್ಳಯವ ಮನೋಭಾವ ಬೆಳೆಸಿಕೊಳ್ಳಬೇಕಿದೆ. ಸ್ಪರ್ಧೆಗಳಲ್ಲಿ ನಿರಂತರವಾಗಿ ಪಾಲ್ಗಿಳ್ಳುವುದರಿಂದ ಪರಿಪಕ್ವತೆ ಮೂಡುತ್ತದೆ. ಗೆಲುವು ಸಾಧಿಸಬೇಕೆಂವ ಛಲ ಉಂಟುಮಾಡುತ್ತದೆ ಎಂದರು.
ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜೇಶ್, ಕಸಾಪ ತಾಲೂಕು ಅಧ್ಯಕ್ಷ ಕೆ.ಎಸ್.ನಾಗೇಶ್, ಫಾತಿಮಾ ಕಾನ್ವೆಂಟ್ ಮುಖ್ಯ ಶಿಕ್ಷಕ ಸಿಸ್ಟರ್ ಥೆರೇಸ್ ಆನ್ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು.
Back to top button
error: Content is protected !!