ಕುಶಾಲನಗರ ಸೆ 13: ಇಲ್ಲಿಗೆ ಸಮೀಪದ ನೇರುಗಳಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ 2022-23 ನೇ ಸಾಲಿನ ಜಮಾಬಂಧಿ ಕಾರ್ಯಕ್ರಮವು ಗ್ರಾಮ ಪಂಚಾಯತಿ ಅಧ್ಯಕ್ಷ ಹೆಚ್, ಕೆ ವಿನೋದ ಕುಮಾರ್ ನವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತಿ ಸಮುದಾಯದ ಭವನದಲ್ಲಿ ನಡೆಯಿತು.
ಸಭೆಯಲ್ಲಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನಡೆದ ಕಾಮಗಾರಿಗಳ ಬಗ್ಗೆ ಚರ್ಚೆಗಳು, ಮತ್ತು ಅವುಗಳ ಪರಿಶೀಲನೆಯ ನಂತರ ಅನುಮೋದನೆ ಕಾರ್ಯ ನೆಡೆಯಿತು ಸಭೆಯಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಬಗ್ಗೆ ಹಾಜರಿದ್ದ ಗ್ರಾಮಸ್ಥರು ತಮ್ಮ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು, ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯತಿ ಅನುದಾನ ಮತ್ತು ನರೇಗ ಯೋಜನೆಯ ಅಡಿಯಲ್ಲಿ ಕಾಮಗಾರಿಗಳ ಕ್ರಿಯಾ ಯೋಜನೆ ಯನ್ನು ತಯಾರಿಸಿ, ಅದರ ಮೂಲಕ ಹಮ್ಮಿಕೊಳ್ಳುವ ಯೋಜನೆಯನ್ನು ಕೈಗೊಳ್ಳಲಾಗುವ ಬಗ್ಗೆ ವಿಷಯ ಸಭೆಯಲ್ಲಿ ಅಭಿವೃದ್ಧಿ ಅಧಿಕಾರಿ ಅಯಿಷಾ ತಿಳಿಸಿದರು.
ನೋಡಲ್ ಅಧಿಕಾರಿಯಾಗಿ ತಾಲ್ಲೂಕು ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ ಇಲಾಖೆಯ ವಿಸ್ತರಣಾಧಿಕಾರಿ ಸ್ವಾಮಿ ಹಾಜರಿದ್ದರು.
ಸಭೆಯಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ , ಜಲಜಾಕ್ಷಿ, ಸೇರಿದಂತೆ ಸರ್ವ ಸದಸ್ಯರು, ಇಂಜಿನಿಯರ್ ಕೀರ್ತನ್, ಅಭಿವೃದ್ಧಿ ಅಧಿಕಾರಿ ಎಂ, ಕೆ, ಅಯಿಷಾ, ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.
Back to top button
error: Content is protected !!