ಕುಶಾಲನಗರ ಸೆ13: ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೂಡಿಗೆ ಕೃಷಿ ಕ್ಷೇತ್ರದ ಆವರಣದಲ್ಲಿರುವ ತೋಟಗಾರಿಕಾ ಕ್ಷೇತ್ರದಲ್ಲಿ ರಾಷ್ಟ್ರೀಯ ತೋಟಗಾರಿಕಾ ಮಿಷನ್ ಯೋಜನೆಯ ಕಿತ್ತಳೆ ಪುನಃ ಚೇತನ ಯೋಜನೆಯ ಅಡಿಯಲ್ಲಿ ಕೊಡಗಿನ ಕಿತ್ತಳೆ ಗಿಡಗಳನ್ನು ಉಚಿತವಾಗಿ ವಿತರಣೆ ಮಾಡಲಾಯಿತು.
ಕುಶಾಲನಗರ, ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯ ಅಯಾ ಗ್ರಾಮ ಪಂಚಾಯತಿಗಳಲ್ಲಿ ಅಯ್ಕೆ ಮಾಡಿದ ಫಲಾನುಭವಿಗಳಿಗೆ ಇಲಾಖೆಯ ನಿಯಮಾನುಸಾರವಾಗಿ ವಿವಿಧ ಬಗೆಯ ಗಿಡಗಳನ್ನು ಕೂಡಿಗೆ ತೋಟಗಾರಿಕಾ ಸಸ್ಯ ಕ್ಷೇತ್ರದಲ್ಲಿ ವಿತರಣೆ ಮಾಡಲಾಗುತ್ತಿದೆ.
ಗಿಡಗಳ ವಿತರಣೆ ರೈತರಿಗೆ ಕೂಡಿಗೆ ತೋಟಗಾರಿಕಾ ಕ್ಷೇತ್ರದ ಅಧಿಕಾರಿ ಆನಂದ್ ವಿತರಣೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅಯ್ಕೆಗೊಂಡ ಫಲಾನುಭವಿಗಳು ಹಾಜರಿದ್ದರು.
Back to top button
error: Content is protected !!