ಕಾರ್ಯಕ್ರಮ

ಇಂಡಿಯನ್ ಸ್ವಚ್ಚತಾ ಲೀಗ್ ಸೀಸನ್ 2.0 ಗೆ ಚಾಲನೆ

 ಕುಶಾಲನಗರ ಸೆ 16: ಕುಶಾಲನಗರ ಪುರಸಭೆ ವತಿಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಚ್ಛ ಭಾರತ ಮಿಷನ್ ಕಾರ್ಯಕ್ರಮದಡಿ ಸ್ವಚ್ಛ ಸರ್ವೇಕ್ಷಣ 2024 ರನ್ವಯ ಕಸದ ವಿಂಗಡಣೆ, ಹಸಿ ಕಸದಿಂದ ಸಾವಯವ ಗೊಬ್ಬರ ತಯಾರಿಕೆ ಹಾಗೂ ಒಣ ತ್ಯಾಜ್ಯ ಸಂಗ್ರಹಣಾ ಕೇಂದ್ರಗಳಲ್ಲಿ ಸಂಗ್ರಹಿಸುವ ತ್ಯಾಜ್ಯ ವಸ್ತುಗಳ ಮರುಬಳಕೆ ಹಾಗೂ ವಿಲೇವಾರಿ ಕುರಿತು ತ್ರೈಮಾಸಿಕ ಅಭಿಯಾನದ ಪ್ರಯುಕ್ತ ಕಾಲೇಜು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಇಂಡಿಯನ್ ಸ್ವಚ್ಛತಾ ಲೀಗ್ ಸೀಸನ್ 2.0 ಗೆ ಚಾಲನೆ ನೀಡಲಾಯಿತು.
ಪುರಸಭಾ ವ್ಯಾಪ್ತಿಯ ಕನ್ನಡ ಭಾರತಿ ಪದವಿಪೂರ್ವ ಮತ್ತು ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳ ಸಹಯೋಗದೊಂದಿಗೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿ ಕಾವೇರಿ ನದಿ ತೀರದ ಪ್ರದೇಶಗಳನ್ನು ಸ್ವಚ್ಛಗೊಳಿಸಲಾಯಿತು
ಪುರಸಭಾ ವ್ಯಾಪ್ತಿಯಲ್ಲಿ ಪರಿಸರ ಸ್ನೇಹಿ ಗೌರಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪರಿಸರ ಉಳಿಸುವ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಜಾಥ ನಡೆಸಲಾಯಿತು. ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಗಳನ್ನು ಪುರಸಭೆಯಿಂದ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹತ್ತಿರದಲ್ಲಿ ನಿರ್ಮಿಸಿರುವ ತಾತ್ಕಾಲಿಕ ಹೊಂಡದಲ್ಲಿ ವಿಸರ್ಜಿಸುವಂತೆ ಹಾಗೂ ಪ್ಲಾಸ್ಟಿಕ್ ಅಲಂಕಾರಿಕ ವಸ್ತುಗಳನ್ನು ಬಳಸದಂತೆ ಎಚ್ಚರಿಕೆ ನೀಡಲಾಯಿತು
ಈ ಸಂದರ್ಭ ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಪ್ರಸಾದ್, ಆರೋಗ್ಯ ನಿರೀಕ್ಷಕ ಉದಯಕುಮಾರ್ ಮತ್ತು ಕಾಲೇಜಿನ ಉಪನ್ಯಾಸಕ ವೃಂದದವರು, ವಿದ್ಯಾರ್ಥಿಗಳು, ಪುರಸಭೆ ಸಿಬ್ಬಂದಿ ವರ್ಗದವರು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!