ಕುಶಾಲನಗರ, ಡಿ 24: : ಕುಶಾಲನಗರ ಪ್ರವಾಸಿ ಮಂದಿರದಲ್ಲಿ ಮಹರ್ಷಿ ವಾಲ್ಮೀಕಿ ಜಾತ್ರೆ ಅಂಗವಾಗಿ ಕೊಡಗು ಜಿಲ್ಲಾ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಕೆ.ಎನ್.ಅಶೋಕ್ ಅಧ್ಯಕ್ಷತೆಯಲ್ಲಿ ಬುಧವಾರ
ಪೂರ್ವಭಾವಿ ಸಭೆ ನಡೆಯಿತು.
ಫೆ. 8 ಮತ್ತು 9 ರಂದು ಎರಡು ದಿನಗಳು ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕು ರಾಜನಹಳ್ಳಿ ಗ್ರಾಮದಲ್ಲಿ ನಡೆಯುವ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದ ಕರಪತ್ರವನ್ನು ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಪರಮಪೂಜ್ಯ ಜಗದ್ಗುರು ಡಾ. ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮೀಜಿಗಳ ಬಿಡುಗಡೆ ಮಾಡಿದರು.ಈ ಸಂದರ್ಭ ಮಾತನಾಡಿದ ಸ್ವಾಮೀಜಿ, ರಾಜನಹಳ್ಳಿಯಲ್ಲಿ
8ನೇ ವರ್ಷದ ಮಹರ್ಷಿ ವಾಲ್ಮೀಕಿ ಜಾತ್ರೆ ನಡೆಯಲಿದ್ದು, ಕೊಡಗು ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಬೇಕು. ಜಾತ್ರೆ ಯಶಸ್ವಿಗೆ ಆರ್ಥಿಕ ನೆರವು ನೀಡಬೇಕು ಎಂದು ಹೇಳಿದರು. ಜಾತ್ರೆ ಬರುವ ಭಕ್ತರಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗುತ್ತದೆ ಎಂದು ತಿಳಿಸಿದರು.
ಸಭೆಯಲ್ಲಿ ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭಾದ ಯುವ ಘಟಕದ ಜಿಲ್ಲಾಧ್ಯಕ್ಷ ಚಂದನ್ ಕುಮಾರ್,ಕೊಡಗು ಜಿಲ್ಲಾ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ವೈ.ಟಿ.ಪರಮೇಶ್,ಖಜಾಂಚಿ ಕೃಷ್ಣ, ಸಹ ಕಾರ್ಯದರ್ಶಿ ಶ್ರೀನಿವಾಸ್, ನಿರ್ದೇಶಕರಾದ ಮಂಜುನಾಥ್, ಅಣ್ಣಯ್ಯನಾಯಕ, ಸೌಂದರ್ಯ, ಸಿದ್ದಲಿಂಗಯ್ಯ, ಕರಿಯಪ್ಪ ಮತ್ತಿತರರು ಪಾಲ್ಗೊಂಡಿದ್ದರು.
ಇದೇ ಸಂದರ್ಭ ಕೊಡಗು ಜಿಲ್ಲಾ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸ್ವಾಮೀಜಿ ಅವರನ್ನು ಸನ್ಮಾನಿಸಿ ಗೌರವಿಸಿದರು.
Back to top button
error: Content is protected !!