ಕ್ರೀಡೆ

ಕುಶಾಲನಗರದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಕರಾಟೆ ಮತ್ತು ಯೋಗ ವಿದ್ಯಾರ್ಥಿಗಳ ಸಾಧನೆ

ಕುಶಾಲನಗರ ಸೆ 26: ಕರಾಟೆ ಅಂದ್ರೆ ಅದೊಂದು ಸಾಹಸ ಕ್ರೀಡೆಯಾಗಿದೆ. ಕೈ ಮತ್ತು ಕಾಲುಗಳ ಮೂಲಕ ತಮ್ಮ ಶಕ್ತಿ ಮತ್ತು ಯುಕ್ತಿಯನ್ನ ತೋರಿಸಬೇಕು. ಯಾರೆಲ್ಲ ನಿರಂತರ ಅಭ್ಯಾಸ ಮತ್ತು ಚಾಣಾಕ್ಷತನದಿಂದ ಕೂಡಿರುತ್ತಾರೋ ಅವರು ಸ್ಪರ್ಧೆಯಲ್ಲಿ ಗೆಲ್ಲಲು ಸಾಧ್ಯ.
ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಇವರ ಸಂಯಯುಕ್ತಾಶ್ರಯದಲ್ಲಿ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ವಿವಿಧೋದ್ದೇಶ ಸಭಾಂಗಣದಲ್ಲಿ ಭಾನುವಾರ ನಡೆದ ಕೊಡಗು ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಫ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಕರಾಟೆ ಪಂದ್ಯಾವಳಿಯಲ್ಲಿ ಕುಶಾಲನಗರದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಕರಾಟೆ ಮತ್ತು ಯೋಗ ಶಾಲೆಯ ಬಾಲಕರ ವಿಭಾಗದಲ್ಲಿ ಅಭಿನಂದ್, ಬ್ರಿಜೇಶ್, ಮುಕುಂದ್, ಹಿತೇಶ್, ಚರಣ್, ಮಿಥುನ್, ಪರಿಣಿತ್, ತೆವೀನ್, ಥೋಮಸ್, ಬಾಲಕಿಯರ ವಿಭಾಗದಲ್ಲಿ ದಕ್ಷಾ, ಇಂಪನಾ, ರಿಷಿಕಾ ಸೇರಿದಂತೆ ಒಟ್ಟು 12 ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿ ಪ್ರಥಮ ಬಹುಮಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಒಬ್ಬರಿಗಿಂತ ಒಬ್ಬರು ಅತ್ಯುತ್ತಮವಾದ ಪ್ರದರ್ಶನ ನೀಡುವ ಮೂಲಕ ಪ್ರೇಕ್ಷಕರು ಮತ್ತು ಪೋಷಕರ ಗಮನ ಸೆಳೆದರು. ಸ್ಪರ್ಧಾಳುಗಳು ತಮ್ಮಲ್ಲಿರುವ ಕೌಶಲ್ಯವನ್ನು ಹೊರಹಾಕಿದರು. ಸ್ಪರ್ಧೆಯಲ್ಲಿ ಅವರ ಪಂಚ್ ಮತ್ತು ಕಿಕ್ ಗಳು ಪ್ರೇಕ್ಷಕರನ್ನು ಚಪ್ಪಾಳೆ ತಟ್ಟುವಂತೆ ಮಾಡುತ್ತಿದ್ದವು.
ಈ ವೇಳೆ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಕರಾಟೆ ಮತ್ತು ಯೋಗ ಸಂಸ್ಥೆಯ ಪ್ರಮುಖ ಸಂಕೇತ್ ಮಾತನಾಡಿ ಸಂಸ್ಥೆಯಿಂದ 24 ವಿದ್ಯಾರ್ಥಿಗಳು ಭಾಗವಹಿಸಿ 12 ವಿದ್ಯಾರ್ಥಿಗಳು ಪ್ರಥಮ ಹಾಗೂ ಜಸೀತ್, ಹೃತ್ವಿಕ್, ಪ್ರಥಮ್, ಶ್ರೇಯಸ್, ಮುಗಿಲ್, ಪ್ರಿಯಾಂಸಿ ಸೇರಿದಂತೆ ಒಟ್ಟು 6 ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿದ್ದು. ಪ್ರಥಮ ಸ್ಥಾನ ಪಡೆದ 12 ವಿದ್ಯಾರ್ಥಿಗಳು ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ ಎಂದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!