ಕುಶಾಲನಗರ, ಅ 02:
ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಭಾರತದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧಿಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವ ಚಿತ್ರಕ್ಕೆ ಕಾಂಗ್ರೆಸ್ ಮುಖಂಡರು ಪುಷ್ಪಾರ್ಚನೆ ಮಾಡುವ ಮೂಲಕ ನಮಿಸಿದರು. ನೆರೆದಿದ್ದವರಿಗೆ ಸಿಹಿ ಹಂಚಲಾಯಿತು.
ನಂತರ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ ಶಶಿಧರ್, ಗಾಂಧೀಜಿ ಅವರ ಹಿನ್ನೆಲೆ ಹಾಗೂ ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಪಾತ್ರ ಮತ್ತು ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ, ಸ್ವಾತಂತ್ರ್ಯ ಪಡೆದ ವಿಚಾರಗಳ ಬಗ್ಗೆ ಸ್ಮರಿಸಿದರು.
ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಅವರ ಆಡಳಿತ ವಿಚಾರಗಳನ್ನು ನೆನಪಿಸಿದರು.
ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡೂರಾವ್ ಗಣ್ಯರ ಕುರಿತು ಮಾತನಾಡಿ ಅವರ ವಿಚಾರಧಾರೆಯನ್ನು ಸಂಕ್ಷಿಪ್ತವಾಗಿ ವಿವರಿಸಿದರು.
ಈ ಸಂದರ್ಭ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಕೊಡಗು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಕೆ.ಪಿ ಚಂದ್ರಕಲಾ, ಕುಶಾಲನಗರ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಬ್ಲಾಕ್ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಕಿರಣ್ ಕುಮಾರ್, ಪುರಸಭಾ ಸದಸ್ಯರುಗಳು, ಗ್ರಾಮ ಪಂಚಾಯಿತಿ ಹಾಲಿ ಮತ್ತು ಮಾಜಿ ಸದಸ್ಯರುಗಳು, ಬ್ಲಾಕ್ ಕಾಂಗ್ರೆಸ್ ನ ಪದಾಧಿಕಾರಿಗಳು, ನಗರ ಕಾಂಗ್ರೆಸ್, ಯುವ ಕಾಂಗ್ರೆಸ್ ನ ಪದಾಧಿಕಾರಿಗಳು, ಕಿಸಾನ್ ಘಟಕದ ಪ್ರಮುಖರು, ಪಕ್ಷದ ಹಿರಿಯರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
Back to top button
error: Content is protected !!