ಕುಶಾಲನಗರ ಏ 08: ಮಾದಾಪಟ್ಟಣ ಗ್ರಾಮಕ್ಕೆ ಸಮರ್ಪಕವಾಗಿ ಕುಡಿವ ನೀರು ಪೂರೈಕೆ ಆಗುತ್ತಿಲ್ಲ ಎಂಬ ಗ್ರಾಮಸ್ಥರ ಆರೋಪದ ಬೆನ್ನಲ್ಲೇ ತಾಲೂಕು ಆಡಳಿತ ವತಿಯಿಂದ ಕುಡಿವ ನೀರು ಸರಬರಾಜಿಗೆ ಕ್ರಮಕೈಗೊಳ್ಳಲಾಯಿತು.
ಜಿಲ್ಲಾ ಉಪ ವಿಭಾಗಾಧಿಕಾರಿ ನರ್ವಡೆ ವಿನಾಯಕ್ ಕಾರ್ಭಾರಿ ಹಾಗೂ ಕುಶಾಲನಗರ ತಾಲೂಕು ತಹಸೀಲ್ದಾರ್ ಕಿರಣ್ ಗೌರಯ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಗ್ರಾಮಸ್ಥರ ಸಮಸ್ಯೆ ಆಲಿಸಿ ಮಾಹಿತಿ ಪಡೆದುಕೊಂಡರು.
ಎಲ್ಲೆಡೆ ಬೇಡಿಕೆ ಅನ್ವಯ ಅಗತ್ಯ ಪ್ರಮಾಣದ ನೀರು ಪೂರೈಕೆ ಮಾಡಲಾಗುತ್ತಿದ್ದು ಆಯಾ ಗ್ರಾಪಂ ವತಿಯಿಂದ ನೀರಿನ ಕೊರತೆ ಎದುರಾಗಿರುವ ಪ್ರದೇಶಗಳ ಬಗ್ಗೆ ಮಾಹಿತಿ ಒದಗಿಸಿದಲ್ಲಿ ಟಾಸ್ಕ್ ಫೋರ್ಸ್ ಗಮನಕ್ಕೆ ಬಂದ ಕೂಡಲೆ ನೀರು ಒದಗಿಸಲು ಕ್ರಮವಹಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Back to top button
error: Content is protected !!