ಪ್ರಕಟಣೆ

ಗಾಂಧಿ ಗ್ರಾಮ ಪುರಸ್ಕಾರ ಸ್ವೀಕರಿಸಿದ ಕೊಡಗಿನ ಮಾದಾಪುರ ಗ್ರಾಪಂ

ಕುಶಾಲನಗರ, ಅ 03:

ಇದೇ ಪ್ರಥಮ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರ ಪಡೆದ ಕೊಡಗಿನ ಮಾದಾಪುರ ಗ್ರಾಮ ಪಂಚಾಯತ್ ಗೆ ಪ್ರಶಸ್ತಿ ಪ್ರದಾನ ನಡೆಯಿತು.
ಬೆಂಗಳೂರಿನಲ್ಲಿ ‌ನಡೆದ ಕಾರ್ಯಕ್ರಮದಲ್ಲಿ
2023 ನೇ ಸಾಲಿನ ರಾಜ್ಯಮಟ್ಟದ ಗಾಂಧಿ ಗ್ರಾಮ ಪುರಸ್ಕಾರವನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಮೇಶ್, ಪಂಚಾಯತ್ ಅದ್ಯಕ್ಷ, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ತೆರಳಿ ಪ್ರಶಸ್ತಿ ಸ್ವೀಕರಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಪ್ರಿಯಾಂಕ ಖರ್ಗೆ ಇವರಿಂದ ಸ್ವೀಕರಿಸಲಾಯಿತು. ಈ ಸಂದರ್ಭ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಉಮಾಮಹದೇವನ್ ಹಾಗೂ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಹಾಗೂ ಆಯುಕ್ತೆ ಪ್ರಿಯಾಂಕ ಮೇರಿ ಪ್ರಾನ್ಸಿಸ್ ರವರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!