ಕುಶಾಲನಗರ, ಫೆ 15: ಸುಂಟಿಕೊಪ್ಪದಲ್ಲಿ ಪೊಲೀಸ್ ವಸತಿ ಗೃಹ ಉದ್ಘಾಟನೆಗೆ ಕೊಡಗಿಗೆ ಆಗಮಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಕೊಡಗು ಕಾಂಗ್ರೆಸ್ ವತಿಯಿಂದ ಕುಶಾಲನಗರ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಶಾಸಕ ಡಾ.ಮಂತರ್ ಗೌಡ ನೇತೃತ್ವದಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ಜೆಸಿಬಿಮೇಲದ ಹೂಮಳೆಗೆರೆದು ಗೃಹ ಸಚಿವರನ್ನು ಬರಮಾಡಿಕೊಳ್ಳಲಾಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಕುಶಾಲನಗರ ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಸೇರಿದಂತೆ ಮುಖಂಡರು, ಕಾರ್ಯಕರ್ತರು ಇದ್ದರು.
Back to top button
error: Content is protected !!