ಕುಶಾಲನಗರ, ಅ 19: ಕೂಡುಮಂಗಳೂರು ಗ್ರಾಮ ಪಂಚಾಯತಿ ಕೆ.ಡಿ.ಪಿ. ಸಭೆಯನ್ನು ಕೂಡುಮಂಗಳೂರು ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಆದರೆ ಪ್ರಮುಖ ಇಲಾಖೆಗಳ ಅಧಿಕಾರಿಗಳು ಬಾರದ ಹಿನ್ನೆಲೆಯಲ್ಲಿ ಸಭೆಯನ್ನು ಮುಂದೂಡಲಾಗಿದೆ ಎಂದು ಗ್ರಾಮ ಪಂಚಾಯತಿ ಅಧ್ಯಕ್ಷ ಭಾಸ್ಕರ್ ನಾಯಕ್ ತಿಳಿಸಿದ್ದಾರೆ. ಗೈರು ಹಾಜರಾದ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆಯಲಾಗುವುದು ಎಂದು ತಿಳಿಸಿದ್ದಾರೆ.
9 ದಿನಗಳ ಹಿಂದೆಯೇ ಎಲ್ಲಾ ಇಲಾಖೆ ಅಧಿಕಾರಿಗಳನ್ನು ಆಹ್ವಾನಿಸಲಾಗಿದ್ದರೂ ಕೆಲವರು ನಿರ್ಲಕ್ಷ್ಯ ತೋರಿದ್ದಾರೆ ಎಂದು ಅಧ್ಯಕ್ಷರು ಆಕ್ರೋಶ ವ್ಯಕ್ತಪಡಿಸಿದರು. ಸಭೆಯ ಮುಂದಿನ ದಿನಾಂಕ ನಿಗದಿಪಡಿಸಲಾಗುವುದು ಎಂದು ತಿಳಿಸಿದರು. ಸರಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಅಧಿಕಾರಿಗಳು ಮನಸ್ಸು ಮಾಡುತ್ತಿಲ್ಲ. ಸರಕಾರದ ವಿರುದ್ದವಾಗಿ ಕಾರ್ಯನಿರ್ವಹಿಸುತ್ತಿರುವ ಇಂತಹ ಅಧಿಕಾರಿಗಳ ವಿರುದ್ದ ಜಿಲ್ಲಾಧಿಕಾರಿ ಸೂಕ್ತ ಕ್ರಮ ಜರುಗಿಸಬೇಕಿದೆ ಎಂದು ಆಗ್ರಹಿಸಿದ್ದಾರೆ. ಪ್ರಮುಖವಾಗಿ ಬರಬೇಕಾದ ಕಂದಾಯ, ಅಬಕಾರಿ, ತೋಟಗಾರಿಕೆ, ಚೆಸ್ಕಾಂ, ಸಮಾಜ ಕಲ್ಯಾಣ, ಪೊಲೀಸ್ ಇಲಾಖೆ, ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಸಭೆಗೆ ಗೈರಾಗಿರುವ ಬಗ್ಗೆ ಆಡಳಿತ ಮಂಡಳಿ ಅಸಮಾಧಾನ ವ್ಯಕ್ತಪಡಿಸಿ ಸಭೆ ಮುಂದೂಡಿದರು.
Back to top button
error: Content is protected !!