ಸಭೆ

ಕೂಡಿಗೆ ಗ್ರಾಮ ಪಂಚಾಯತಿ ಮಾಸಿಕ ಸಭೆ: ನಿವೇಶನ ರಹಿತರಿಗೆ ಜಾಗ ನೀಡುವ ಬಗ್ಗೆ ಚರ್ಚೆ

ಕುಶಾಲನಗರ ಅ.26: ಕೂಡಿಗೆ ಗ್ರಾಮ ಪಂಚಾಯತಿ ಮಾಸಿಕ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ.ಟಿ.ಗಿರೀಶ್ ಅವರ ಅಧ್ಯಕ್ಷತೆಯಲ್ಲಿ ಪಂಚಾಯತಿ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಅಭಿವೃದ್ಧಿಗೆ ಪೂರಕವಾದ ಅಂಶಗಳ ಬಗ್ಗೆ ಮೊದಲು ಚರ್ಚೆಗಳು ನಡೆದವು. ನಂತರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಈಗಾಗಲೇ ನಿವೇಶನ ರಹಿತರಿಗೆ ಕಾಯ್ದಿರಿಸಲಾಗಿರುವ ವಸತಿ ಜಾಗದಲ್ಲಿ ನಿವೇಶನಗಳ ನಿರ್ಮಾಣಕ್ಕೆ ಅನುಕೂಲ ಕಲ್ಪಿಸಲು ತುರ್ತಾಗಿ ಕ್ರಮ ವಹಿಸುವಂತೆ ಸಭೆಯಲ್ಲಿ ಹಾಜರಿದ್ದ ಸದಸ್ಯರಾದ ಟಿ.ಪಿ ಹಮೀದ್, ರವಿ, ಅರುಣ್ ರಾವ್ ಒತ್ತಾಯ ಮಾಡಿದರು. ಮುಂದಿನ ದಿನಗಳಲ್ಲಿ ಸ್ವಚ್ಛತೆಗೆ ಪೂರಕವಾಗಿ, ಕುಡಿಯುವ ನೀರಿನ ಟ್ಯಾಂಕ್ ಗಳ ಶುದ್ಧೀಕರಣಗ ಮತ್ತು ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡುವ ಬಗ್ಗೆ ಚರ್ಚೆಗಳು ನಡೆದವು. ಈಗಾಗಲೇ ಹರಾಜು ಪ್ರಕ್ರಿಯೆಯಲ್ಲಿ ನಿಗದಿ ಮಾಡಿರುವ ಹಣವನ್ನು ಕೋಳಿ ಮಾಂಸದ ಮಾರಾಟ ಮಳಿಗೆಗಳ ಟೆಂಡರ್ ನಿಯಮದಂತೆ ಪಾವತಿಸುವಂತೆ ಟೆಂಡರ್ ಪಡೆದ ಗುತ್ತಿಗೆದಾರಿಗೆ ಸೂಚನೆ ನೀಡುವಂತೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. 15ನೇ ಹಣಕಾಸು ಯೋಜನೆಯ ಅನುಗುಣವಾಗಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳುವ ಬಗ್ಗೆ ಚರ್ಚೆಗಳು ನಡೆದವು,

ಸಭೆಯಲ್ಲಿ ಅಭಿವೃದ್ಧಿ ಅಧಿಕಾರಿ ಮಂಜುಳಾ ಸರಕಾರದ ಹೊಸ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಸಭೆಗೆ ಬಂದ ಸಾರ್ವಜನಿಕರ ಅರ್ಜಿಗಳ ಬಗ್ಗೆ ಚರ್ಚೆಗಳು ನಡೆದವು.

ಅಧ್ಯಕ್ಷತೆ ವಹಿಸಿದ್ದ ಕೆ.ಟಿ.ಗಿರೀಶ್ ಮಾತನಾಡಿ, ಸದಸ್ಯರ ಸಹಕಾರದೊಂದಿಗೆ ಎಲ್ಲಾ ವಾರ್ಡ್ ಗಳಲ್ಲಿ ಮೂಲಭೂತ ಸೌಕರ್ಯಗಳ ಒದಗಿಸಲು ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಎಲ್ಲರ ಸಹಕಾರ ಮುಖ್ಯ. ಮುಂದಿನ ದಿನಗಳಲ್ಲಿ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಲಹೆಯನ್ನು ಪಡೆದು ನಿವೇಶನ ಹಂಚಿಕೆ ಬಗ್ಗೆ ಕ್ರಮವನ್ನು ವಹಿಸಲಾಗುವುದು ಎಂದರು.

ಈ ಸಂದರ್ಭ ಗ್ರಾಪಂ ಉಪಾಧ್ಯಕ್ಷೆ ವಿ.ಜಯಶ್ರೀ, ಸದಸ್ಯರಾದ.ಟಿ.ಪಿ. ಹಮೀದ್, ಎಸ್.ಎನ್. ಅರುಣ್ ರಾವ್, ಅನಂತ, ಮಂಗಳ, ಮೋಹಿನಿ, ವಾಣಿ, ರತ್ನಮ್ಮ, ಹೆಚ್. ಎಸ್. ರವಿ, ಪಲ್ಲವಿ, ಹೆಚ್. ಆರ್. ಚಂದ್ರು, ಎಂ. ಎಸ್‌. ಜಯಶೀಲಾ, ಸೇರಿದಂತೆ ಗ್ರೇಡ್ 1 ಕಾರ್ಯದರ್ಶಿ ಅಂಜನಾದೇವಿ, ಕಾರ್ಯದರ್ಶಿ ಪುನೀತ್ ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!