ಕುಶಾಲನಗರ, ಅ 27: ಕಾವೇರಿ ನೀರಾವರಿ ನಿಗಮದ ವತಿಯಿಂದ ರೂ 10 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಗುಮ್ಮನಕೊಲ್ಲಿ-ಹಾರಂಗಿ ಸಂಪರ್ಕ ರಸ್ತೆ ಕಾಮಗಾರಿಯನ್ನು ಶಾಸಕ ಮಂಥರ್ ಗೌಡ ಪರಿಶೀಲಿಸಿದರು.
ತಾಂತ್ರಿಕ ಸಮಸ್ಯೆಯಿಂದ ಆಮೆಗತಿಯಲ್ಲಿ ಸಾಗುತ್ತಿದ್ದ ಕಾಮಗಾರಿ ಅಪೂರ್ಣವಾದ ಕಾರಣ ಸವಾರರು ಒರದಾಡುವ ಸ್ಥಿತಿ ಎದುರಾಗಿದ್ದು, ಆಗಾಗ್ಯೆ ಅಪಘಾತಗಳು ಸಂಭವಿಸುತ್ತಿರುವ ಬಗ್ಗೆ ಸ್ಥಳೀಯ ದೂರಿನ ಮೇರೆಗೆ ಶಾಸಕರು ಸ್ಥಳ ಪರಿಶೀಲಿಸಿದರು. ಗೋಪಾಲ್ ಸರ್ಕಲ್ ನಿಂದ ಚಿಕ್ಕತ್ತೂರು ಗ್ರಾಮದವರೆಗೆ ವಿವಿಧ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಪರಿಶೀಲಿಸಿ ಮಾಹಿತಿ ಪಡೆದು ಕಾಮಗಾರಿ ವಿಳಂಭಕ್ಕೆ ಕಾರಣವಾಗಿರುವ ಸಮಸ್ಯೆಗಳ ನಿವಾರಣೆಗೆ ಶೀಘ್ರ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಮಂಥರ್ ಗೌಡ, ಹಾರಂಗಿ ರಸ್ತೆ ಅಭಿವೃದ್ಧಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ನಿಗಮದ ಅಧಿಕಾರಿ ಮತ್ತು ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ನೀರಾವರಿ ನಿಗಮ, ಚೆಸ್ಕಾಂ, ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲಿಸಿ ಚರ್ಚಿಸಿ
ಮರಗಳ ತೆರವು, ವಿದ್ಯುತ್ ಕಂಬಗಳ ಸ್ಥಳಾಂತರಕ್ಕೆ ಅಗತ್ಯ ಕ್ರಮಕೈಗೊಳ್ಳಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭ ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ವಿಜಯನಗರಕ್ಕೆ ಭೇಟಿ ನೀಡಿ ಅಲ್ಲಿನ ನಿವಾಸಿಗಳ ಅಹವಾಲನ್ನು ಶಾಸಕರು ಆಲಿಸಿದರು.
ವಿಜಯನಗರದ ಜನತಾ ಕಾಲನಿಯಲ್ಲಿ 12 ಮನೆಗಳಿಗೆ ಸಂಬಂಧಿಸಿದಂತೆ ಜಾಗದ ವಿವಾದದ ಬಗ್ಗೆ ಅಲ್ಲಿನ ನಿವಾಸಿಗಳು ಶಾಸಕರ ಗಮನ ಸೆಳೆದರು. ಈ ಬಗ್ಗೆ ಗ್ರಾಪಂ ಪಿಡಿಒ ಸಂತೋಷ್ ಅವರಿಂದ ಶಾಸಕರು ಮಾಹಿತಿ ಪಡೆದುಕೊಂಡರು.
ಈ ಸಂದರ್ಭ ಆರ್.ಎಫ್.ಒ.ರತನ್ ಕುಮಾರ್, ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರ ದೇವೇಗೌಡ, ಸಹಾಯಕ ಕಾರ್ಯಪಾಲಕ ಅಭಿಯಂತರ ಪುಟ್ಟಸ್ವಾಮಿ, ಚೆಸ್ಕಾಂನ ವಿನಯ್, ಡಿ.ಆರ್.ಎಫ್.ಒ.ಅನಿಲ್ ಡಿಸೋಜ,
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ಜಿಪಂ ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ, ಪುರಸಭೆ ಸದಸ್ಯ ಎಂ.ಕೆ.ದಿನೇಶ್, ಪ್ರಮುಖರಾದ ಕಿರಣ್, ಗ್ರಾಪಂ ಸದಸ್ಯ ಗಿರೀಶ್, ಶಂಶುದ್ದಿನ್, ಫಿಲೋಮಿನಾ, ಗುತ್ತಿಗೆದಾರ ಕಿರಣ್ ಮತ್ತಿತರರು ಇದ್ದರು.
Back to top button
error: Content is protected !!