ಸುದ್ದಿಗೋಷ್ಠಿ

ಗ್ರಾ.ಪಂ ನೌಕರರ ಕನಿಷ್ಟ ವೇತನ ನಿಗದಿ,ಪಿಂಚಣಿಗೆ ಒತ್ತಾಯಿಸಿ ನ.17ರಂದು ಬೆಂಗಳೂರು ಚಲೋ

ಕುಶಾಲನಗರ ಅ.27: ಗ್ರಾಮ ಪಂಚಾಯಿತಿ ನೌಕರರ ಕನಿಷ್ಠ ವೇತನ ನಿಗದಿ ಹಾಗೂ ಪಿಂಚಣಿಗಾಗಿ ಒತ್ತಾಯಿಸಿ ನವೆಂಬರ್ 7ರಂದು ಬೆಂಗಳೂರು ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮ ಪಂಚಾಯತ್ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಪಿ ಆರ್ ಭರತ್ ತಿಳಿಸಿದ್ದಾರೆ.
ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಬಗ್ಗೆ ಜಿಲ್ಲಾ ಪಂಚಾಯತ್ ಅನುಮೋದನೆಗಾಗಿ ಒತ್ತಾಯಿಸಿ ನವೆಂಬರ್ 3ರಂದು ಕೊಡಗು ಜಿಲ್ಲಾ ಪಂಚಾಯಿತಿ ಕಚೇರಿ ಮುಂದೆ ಧರಣಿ ನಡೆಸಿ ಮನವಿ ಸಲ್ಲಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕರವಸೂಲಿಗಾರ, ಕ್ಲರ್ಕ್, ಡಾಟಾ ಎಂಟ್ರಿ ಆಪರೇಟರ್ಸ್, ನೀರು ಗಂಟಿಗಳು, ಜವಾನ, ಸ್ವಚ್ಛತಾ ಗಾರರನ್ನು ಏಕಕಾಲಕ್ಕೆ ಸರ್ಕಾರಿ ನೌಕರನಾಗಿ ಘೋಷಿಸಬೇಕು.
ದಿನನಿತ್ಯದ ಬಳಸುವ ವಸ್ತುಗಳ ಬೆಲೆ ಏರಿಕೆಗೆ ಅನುಗುಣವಾಗಿ ಕನಿಷ್ಠ ವೇತನ 31 ಸಾವಿರ ನಿಗದಿಗೊಳಿಸಬೇಕು. ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸುವ ನೌಕರರಿಗೆ ನಿವೃತ್ತಿ ಅಥವಾ ಮರಣ ಹೊಂದಿದರೆ ಅವರಿಗೆ ಪ್ರತಿ ತಿಂಗಳು ಕನಿಷ್ಠ 6 ಸಾವಿರ ರೂ ಪಿಂಚಣಿ ವ್ಯವಸ್ಥೆ ಜಾರಿಗೆ ಬರಬೇಕು.
ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುವ ನೌಕರರಿಗೆ ವರ್ಗಾವಣೆ ಅವಕಾಶ ನೀಡಬೇಕು. ಆದಾಯಕ್ಕೆ ಅನುಗುಣವಾಗಿ ಕರವಸೂಲಿಗಾರರ ಹುದ್ದೆಗಳನ್ನು ನಿಗದಿಗೊಳಿಸಬೇಕು. ಪ್ರತಿಯೊಂದು ಗ್ರಾಮ ಪಂಚಾಯಿತಿಗಳಿಗೆ ಲೆಕ್ಕ ಸಹಾಯಕ ಹುದ್ದೆ ಸೃಷ್ಟಿಸಬೇಕು. ಸೇವಾ ಹಿರಿತನ ಪರಿಗಣಿಸಿ ವೇತನ ಹೆಚ್ಚಳ ಮಾಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಡಲಾಗಿದೆ ಎಂದು ಭರತ್ ತಿಳಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಬಹುತೇಕ ಪಂಚಾಯಿತಿಗಳಲ್ಲಿ ಅಭಿವೃದ್ಧಿ ಅಧಿಕಾರಿಗಳು ಕಚೇರಿಯ ಎಲ್ಲಾ ಕೆಲಸವನ್ನು ನಿರ್ವಹಿಸುವಂತಹ ಪರಿಸ್ಥಿತಿ ಸೃಷ್ಟಿಯಾಗಿದೆ. ತಕ್ಷಣ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿಗೊಳಿಸಬೇಕು ಎಂದು ಅವರು ಆಗ್ರಹಿಸಿದರು.
ನವಂಬರ್ 3 ರಂದು ಜಿಲ್ಲಾ ಕೇಂದ್ರದಲ್ಲಿ ಅಧಿಕಾರಿಗಳಿಗೆ ಮನವಿ ಸಲ್ಲಿಕೆ, ನವೆಂಬರ್ 7ರಂದು ಬೆಂಗಳೂರು ರೈಲ್ವೆ ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನವನ ತನಕ ಬೃಹತ್ ಮೆರವಣಿಗೆ ನಡೆಯಲಿದೆ ಎಂದು ಅವರು ಹೇಳಿದರು. ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯ ಗ್ರಾಮ ಪಂಚಾಯತ್ ನೌಕರರು ಬೆಂಗಳೂರು ಚಲೋ ಪ್ರತಿಭಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಗೋಷ್ಟಿಯಲ್ಲಿ ಗ್ರಾಮ ಪಂಚಾಯಿತಿ ನೌಕರರ ಕುಶಾಲನಗರ ತಾಲೂಕು ಖಜಾಂಚಿ ಅಮೀರ್, ಜಿಲ್ಲಾ ಸಮಿತಿ ಸದಸ್ಯರಾದ ರಂಗಸ್ವಾಮಿ ಮತ್ತು ಬಾಪು ಇದ್ದರು.

 

Related Articles

Leave a Reply

Your email address will not be published. Required fields are marked *

Back to top button
error: Content is protected !!