ಕುಶಾಲನಗರ, ಅ 29: ಅಖಿಲ ಭಾರತ ವೀರಶೈವ ಮಹಾಸಭಾದ ಕೊಡಗು ಜಿಲ್ಲಾ ಘಟಕದ ಆಶ್ರಯದಲ್ಲಿ ಹಾನಗಲ್ ಶ್ರೀ ಕುಮಾರಸ್ವಾಮಿಗಳ 156ನೇ ಜಯಂತಿ ಮತ್ತು ಡಾ.ಶ್ರೀ ಶ್ರೀ ಶಿವಕುಮಾರಸ್ವಾಮಿ ಜಯಂತಿ ಮತ್ತು ಜನಜಾಗೃತಿ ಸಭೆ ಕುಶಾಲನಗರದ ರೈತ ಸಹಕಾರ ಭವನದಲ್ಲಿ ನಡೆಯಿತು.
ನಿವೃತ್ತ ಐಪಿಎಸ್ ಅಧಿಕಾರಿ ಶಂಕರ್ ಮಹದೇವ ಬಿದರಿ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಪ್ರತಿಯೊಬ್ಬರೂ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಯುವ ಸಮೂಹಕ್ಕೆ ಸರಿಯಾದ ಮಾರ್ಗದರ್ಶನದ ಅಗತ್ಯವಿದೆ. ಸೂಕ್ತ ದಾರಿಯಲ್ಲಿ ಸಾಗಲು ಪ್ರೇರೇಪಿಸಬೇಕಿದೆ. ಸುಭದ್ರ ಸಮಾಜ ನಿರ್ಮಾಣ ಯುವ ಸಮೂಹದಿಂದ ಮಾತ್ರ ಸಾಧ್ಯ. ದೇಶ ಹಾಗೂ ಧರ್ಮದ ರಕ್ಷಣೆಗೆ ಎಲ್ಲರೂ ಪ್ರಮುಖ ಆದ್ಯತೆ ನೀಡಬೇಕಿದೆ. ಮುಂದಿನ ವರ್ಷದಿಂದ ಪ್ರೋತ್ಸಾಹ ಧನವನ್ನು ಕನಿಷ್ಠ 10 ಸಾವಿರದಿಂದ 5 ಲಕ್ಷದವೆರೆಗೆ ವಿತರಣೆಗೆ ಮಹಾಸಭಾ ಮುಂದಾಗಬೇಕಿದೆ ಎಂದರು.
ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮದ ಬಗ್ಗೆ ಮಾಹಿತಿ ಒದಗಿಸಿದರು. ಪ್ರತಿ ವರ್ಷ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಸಂಘಟನೆಗೆ ಹೆಚ್ಚಿನ ಒತ್ತು ನೀಡಲು ಕರೆ ನೀಡಿದರು. ಕೊಡಗಿನಲ್ಲಿ ಸಮಾಜದ ಕಟ್ಟಡ ನಿರ್ಮಾಣ, ಸೌಹಾರ್ದ ಸಂಘದ ಕಾರ್ಯಾರಂಭಕ್ಕೆ ಎಲ್ಲರೂ ಪೂರಕವಾಗಿ ಸಹಕರಿಸಿಬೇಕೆಂದರು.
Back to top button
error: Content is protected !!