ಕುಶಾಲನಗರ, ಅ 30:
ಕೂಡುಮಂಗಳೂರು ಗ್ರಾಮ ಪಂಚಾಯತಿ ಮಾಸಿಕ ಸಭೆಯು ಅಧ್ಯಕ್ಷ ಭಾಸ್ಕರ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸವನತ್ತೂರು ಗ್ರಾಮದಲ್ಲಿರುವ ಆನೆಕೆರೆಯಲ್ಲಿ ನೀರಿನ ಸಂಗ್ರಹ ಮಟ್ಟಹೆಚ್ಚಿಸುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಆನೆ ಕೆರೆಯ ಹೂಳು ಎತ್ತುವ ಕಾರ್ಯದ ಕಾಮಗಾರಿಯ ಕ್ರಿಯಾ ಯೋಜನೆಯನ್ನು ತಯಾರಿಸಿ ಕಾಮಗಾರಿಯನ್ನು ಕೈಗೊಳ್ಳುವಂತೆ ಸಭೆಯಲ್ಲಿ ಹಾಜರಿದ್ದ ಸದಸ್ಯರು ಒಕ್ಕೊರಲಿನ ತೀರ್ಮಾನ ಕೈಗೊಂಡರು.
ಸಭೆಯಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ವಾರ್ಡ್ ಗಳಿಗೆ ಕುಡಿಯುವ ನೀರಿನ ಸಮಸ್ಯೆ ಸಮರ್ಪಕವಾಗಿ ನಿರ್ವಹಿಸಲು, ಶುಚಿತ್ಚಗೆ ಹೆಚ್ಚಿನ ಅಧ್ಯತೆ ನೀಡುವ ವಿಷಯಗಳ ಬಗ್ಗೆ ಸುಧೀರ್ಘ ಚರ್ಚೆಗಳು ನಡೆದವು.
ಹಾಲಿ ಇರುವ ಗ್ರಾಮ ಪಂಚಾಯತಿ ಕಟ್ಟಡವು ಮುಂದಿನ ದಿನಗಳಲ್ಲಿ ರಸ್ತೆಯ ಅಗಲಿಕರಣ ಮಾಡುವ ಸಂದರ್ಭದಲ್ಲಿ ಹಾನಿಯಾಗುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿ ನೂತನ ಕಟ್ಟಡ ಕಟ್ಟಲು ಸೂಕ್ತ ಸ್ಥಳ ಕೋರಿ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಅವರನ್ನು ಆಡಳಿತ ಮಂಡಳಿಯ ಸರ್ವ ಸದಸ್ಯರು ಭೇಟಿಯಾಗಿ ಮನವಿ ಸಲ್ಲಿಸುವುದು ಮತ್ತು ಕೃಷಿ ಇಲಾಖೆಯ ಜಾಗದಲ್ಲಿ ಸ್ಧಳ ಕಾಯ್ದಿರಿಸುವ ವಿಷಯಗಳ ಬಗ್ಗೆ ಚರ್ಚೆಗಳು ನಡೆದವು.
ಹಾರಂಗಿ ಮತ್ತು ಸುಬ್ರಮಣ್ಯ ಸ್ವಾಮಿ ದೇವಾಲು ರಸ್ತೆಯ ಅಗಲಿಕರಣ ವಿಷಯಗಳ ಬಗ್ಗೆ, 15ನೇ ಹಣಕಾಸು ಕ್ರಿಯಾ ಯೋಜನೆಯ ಕಾಮಗಾರಿಗಳನ್ನು ಆರಂಭ ಮಾಡುವ ಬಗ್ಗೆ ಚರ್ಚೆಗಳು ನಡೆದವು.
ವಿವಿಧ ಯೋಜನೆಯ ಅನುಗುಣವಾಗಿ ಎಲ್ಲಾ ಕಾಮಗಾರಿಗಳ ಕ್ರಿಯಾ ಯೋಜನೆ ಮೂಲಕ ನಡೆಸುವಂತೆ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಭಾಸ್ಕರ್ ನಾಯಕ್ ಮಾತನಾಡಿ, ಸಭೆಯಲ್ಲಿ ಚರ್ಚಿಸಿದ ವಿಷಯಗಳನ್ನು ಈಗಾಗಲೇ ಲಿಖಿತವಾಗಿ ಪುಸ್ತಕದಲ್ಲಿ ದಾಖಲೆ ಮಾಡಲಾಗಿದೆ. ಅದರನ್ವಯ ಹಂತ ಹಂತವಾಗಿ ಎಲ್ಲಾ ವಾರ್ಡ್ ಗಳ ಮೂಲಭೂತ ಸೌಕರ್ಯಗಳನ್ನು, ವಿವಿಧ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದು. ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿಗಳನ್ನು ಕೈಗೊಳ್ಳಲು ಎಲ್ಲಾ ಸದಸ್ಯರ ಸಹಕಾರ ಮುಖ್ಯ ಎಂದರು.
ಸಭೆಯಲ್ಲಿ ಅಭಿವೃದ್ಧಿ ಅಧಿಕಾರಿ ಸರಕಾರದ ಹೊಸ ಯೋಜನೆಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು. ಸಭೆಯಲ್ಲಿ ಗ್ರಾಪಂ ಉಪಾಧ್ಯಕ್ಷೆ ಶಶಿಕಲಾ ಸೇರಿದಂತೆ ಸರ್ವ ಸದಸ್ಯರು, ಅಭಿವೃದ್ಧಿ ಅಧಿಕಾರಿ ಸಂತೋಷ್ ಹಾಜರಿದ್ದರು.
Back to top button
error: Content is protected !!