ಟ್ರೆಂಡಿಂಗ್

ಕನ್ನಡಸಿರಿ ಸ್ನೇಹ ಬಳಗದ ವತಿಯಿಂದ ಕನ್ನಡ ರಾಜ್ಯೋತ್ಸವ, ವಿಚಾರಗೋಷ್ಠಿ

ಕುಶಾಲನಗರ ನ. 02 : ಕುಶಾಲನಗರದ ಕನ್ನಡ ಸಿರಿ ಸ್ನೇಹ ಬಳಗದ ವತಿಯಿಂದ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ಅಂಗವಾಗಿ ಕನ್ನಡ ರಾಜ್ಯೋತ್ಸವ ಹಾಗೂ ಸುವರ್ಣ ಹೆಚ್ಚೆಯಲ್ಲಿ ಕರ್ನಾಟಕ ಎಂಬ ವಿಚಾರಗೋಷ್ಠಿ ಕಾರ್ಯಕ್ರಮ‌ ನಡೆಯಿತು.

ಕಾರ್ಯಕ್ರಮ ಉದ್ಘಾಟನೆಯನ್ನು ಕಣಿವೆಯ ಹಿರಿಯ ಸಾಹಿತಿ ಭಾರದ್ವಾಜ್ ಕೆ. ಆನಂದತೀರ್ಥ ನೆರವೇರಿಸಿ, ಕನ್ನಡ ರಾಜ್ಯೋತ್ಸವ ದಿನದ ಮಹತ್ವದ ಬಗ್ಗೆ ಮಾತನಾಡಿದರು.

ಸಭೆಯ ಅಧ್ಯಕ್ಷತೆಯನ್ನು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಕೆ .ಪ್ರಕಾಶ್ ವಹಿಸಿದ್ದರು.

ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಪ್ರಸ್ತಾವಿಕವಾಗಿ ಮಾತನಾಡಿದರು

ಮುಖ್ಯ ಅತಿಥಿಗಳಾಗಿ ಕುಶಾಲನಗರ ಪುರಸಭಾ ಸದಸ್ಯ ವಿ.ಎಸ್‌. ಆನಂದ್ ‌ಕುಮಾರ್, ಬಾಲಕಿಯರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯನಿ ಬಿ.ಎನ್. ಪುಷ್ಪ, ವಿವಿಧ ಕನ್ನಡ ಪರ ಸಂಘಟನೆ ಅಧ್ಯಕ್ಷರುಗಳಾದ ಎಂ .ಕೃಷ್ಣ, ನಾಗೇಗೌಡ, ಅಣ್ಣಯ್ಯ, ಮೈಸೂರಿನ ಪ್ರಾಂಶುಪಾಲ ಪಿ. ಎಸ್. ಜಾನ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂಗವಾಗಿ 50 ವರ್ಷಗಳಲ್ಲಿ ಕರ್ನಾಟಕ ಸಾಂಸ್ಕೃತಿಕ ವೈಭವ ಎಂಬ ವಿಷಯ ಮಂಡನೆಯನ್ನು ಹಂಡ್ರಂಗಿ ನಾಗರಾಜ್, ಕನ್ನಡ ಪರ ಸಂಘಟನೆಗಳ ಕೊಡುಗೆ ಎಂಬ ವಿಷಯ ಎಂ. ಡಿ. ರಂಗಸ್ವಾಮಿ ಮಂಡಿಸಿದರು. ಚುಟುಕು ಸಾಹಿತ್ಯದಲ್ಲಿ ಹಾಸ್ಯ ಮತ್ತು ಮೌಲ್ಯ ಎಂಬ ವಿಷಯದ ಬಗ್ಗೆ ಕುಶಾಲನಗರ ಸರಕಾರಿ ಪ್ರೌಢಶಾಲೆಯ ಶಿಕ್ಷಕ ಹಾಗೂ ಕಲಾವಿದರು ಉ.ರಾ. ನಾಗೇಶ್, ಮಂಡಿಸಿದರು.

ಈ ಸಂದರ್ಭದಲ್ಲಿ ಕನ್ನಡ ಪರ ಸಂಘಟನೆಗಳ ಮುಖ್ಯಸ್ಥರು ಹಾಗೂ ಕನ್ನಡಾಭಿಮಾನಿಗಳು ಹಾಗೂ ಕನ್ನಡ ಸಿರಿ ಸ್ನೇಹ ಬಳಗದ ಸದಸ್ಯರು ತಾಲ್ಲೂಕು ಮಟ್ಟದ ವಿವಿಧ ಶಾಲೆಯ ಶಿಕ್ಷಕರು ಹಾಜರಿದ್ದರು.

ಪ್ರಾಂಶುಪಾಲ ಪಿ .ಎಸ್. ಜಾನ್ ಸ್ವಾಗತಿಸಿ, ರಮೇಶ್ ಕಾರ್ಯಕ್ರಮ ನಿರೂಪಿಸಿ, ಕೆ.ಕೆ ನಾಗರಾಜಶೆಟ್ಟಿ ವಂದಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!