ಕುಶಾಲನಗರ ನ 04: ರಾಜ್ಯಾದ್ಯಂತ ಸುವರ್ಣ ಸಂಭ್ರಮ ಆಚರಿಸುತಿರುವ ಹಿನ್ನಲೆಯಲ್ಲಿ ಕುಶಾಲನಗರ ಸರ್ಕಾರಿ ತಾಂತ್ರಿಕ ಶಿಕ್ಷಣ ಸಂಸ್ಥೆ ಹಾಗೂ ಕನ್ನಡ ಸಿರಿ ಸ್ನೇಹ ಬಳಗದ ಸಹಯೋಗದೊಂದಿಗೆ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಸಂಸ್ಥೆಯ ಮುಂಭಾಗ ಶ್ರೀ ವಿಶ್ವೇಶ್ವರಯ್ಯ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಭಾಗಮಂಡಲ ಕಾವೇರಿ ಕಾಲೇಜಿನ ಪ್ರಾಂಶುಪಾಲ ದಿವಾಕರ್, ಕನ್ನಡವೆಂಬುದು ಬರಿ ಭಾಷೆಯಲ್ಲ. ಅದು ನಮ್ಮ ನಾಡಿನ ಹಿರಿಮೆ, ನಾವು ಎಷ್ಟೋ ಉನ್ನತ ಶಿಕ್ಷಣ ಪಡೆದರೂ ತಾಯಿ ಭಾಷೆಯ ಶಿಕ್ಷಣ ನಮ್ಮ ನಾಡ ಅಭಿವೃದ್ಧಿಗೆ ಸಹಕರಿಸುತ್ತದೆ. ಇದರಿಂದ ದೇಶದ ಅಭಿವೃದ್ಧಿಯಾತ್ತದೆ ಎಂದರು “ಕನ್ನಡದಲ್ಲಿ ತಂತ್ರಾಂಶ ” ಎಂಬ ವಿಷಯವನ್ನುದ್ದೇಶಿಸಿ ಮಾತನಾಡಿದ ಕನ್ನಡ ಸಿರಿ ಸ್ನೇಹ ಬಳಗದ ಅಧ್ಯಕ್ಷ ಲೋಕೇಶ್ ಸಾಗರ್, ಕಳೆದ 50 ವರ್ಷಗಳಲ್ಲಿ ಕನ್ನಡ ಭಾಷೆ ಶಿಕ್ಷಣ ಕೃಷಿ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಆಧುನಿಕ ತಂತ್ರಜ್ಞಾನದ ಬಳಕೆಯಿಂದ ನಾಡು ಎಲ್ಲಾ ಕ್ಷೇತ್ರಗಳಲ್ಲಿಯೂ ಅಭಿವೃದ್ಧಿ ಹೊಂದುತ್ತಿದೆ. ಇದು ಸಂಶೋಧಕರ ಕೊಡುಗೆಯಾಗಿದೆ. ತಾಂತ್ರಿಕ ಶಿಕ್ಷಣ ವಿಧ್ಯಾರ್ಥಿಗಳಾದ ತಾವು ವಿವಿಧ ಕ್ಷೇತ್ರಗಳಲ್ಲಿ ಸಂಶೋಧನೆಯಲ್ಲಿ ತೊಡಗಿಕೊಂಡು ದೇಶದ ಅಭಿವೃದ್ಧಿಯಲ್ಲಿ ಮುಖ್ಯ ಪಾತ್ರ ವಹಿಸಬೇಕೆಂದು ಕರೆ ಕೊಟ್ಟರು.
ಸಂಸ್ಥೆಯ ಪ್ರಾಚಾರ್ಯ ಡಾ.ಎನ್. ಎಸ್. ಸತೀಶ್ ಮಾತನಾಡಿದರು.
Back to top button
error: Content is protected !!