ಕುಶಾಲನಗರ ನ.12: ಕೂಡಿಗೆಯ ಶ್ರೀ ದಂಡಿನಮ್ಮ ಮತ್ತು ಶ್ರೀ ಬಸವೇಶ್ವರ ಹಾಗೂ ಮುತ್ತತ್ ರಾಯ ದೇವಸ್ಥಾನ ಹಾಗೂ ಸೇವಾ ಸಮಿತಿಯ ಅಧ್ಯಕ್ಷರಾಗಿ ಕೆ.ಕೆ.ಸೋಮಶೇಖರ್ (ಮಂಜುನಾಥ) ಅಯ್ಕೆಗೊಂಡಿರುತ್ತಾರೆ.
ಶ್ರೀ ಬಸವೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆದ 2022-23 ನೇ ಸಾಲಿನ ಲೆಕ್ಕಪತ್ರ , ವಾರ್ಷಿಕ ವರದಿ ನಡೆದ ಸಭೆಯಲ್ಲಿ ಗ್ರಾಮಸ್ಥರ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು.
ನೂತನ ಉಪಾಧ್ಯಕ್ಷರಾಗಿ ಕೆ.ಎನ್ ಮಂಜುನಾಥ, ಕಾರ್ಯದರ್ಶಿ ಕೆ.ಎಸ್ ಚಂದ್ರಶೇಖರ್, ಉಪ ಕಾರ್ಯದರ್ಶಿಯಾಗಿ ಕೆ.ಎಸ್. ಶೇಖರ್ ಶೆಟ್ಟಿ ಸೇರಿದಂತೆ ನಿರ್ದೇಶಕರುಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
Back to top button
error: Content is protected !!