ಕುಶಾಲನಗರ, ನ 16: : ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ಅವರಲ್ಲಿ ಕ್ರಿಯಾಶೀಲತೆ ಹಾಗೂ ಉತ್ತಮ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗುತ್ತವೆ ಎಂದು ಕುಶಾಲನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ನಾಗೇಶ್ ಹೇಳಿದರು.
ಸ್ಥಳೀಯ ಮಹಾತ್ಮ ಗಾಂಧಿ ಪದವಿ ಕಾಲೇಜಿನ ಶ್ರೀ ಶಿವಕುಮಾರಸ್ವಾಮಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಕಲಾ ಸಂಗಮ ” ಕಲಾರಂಭ್ – 2023 ” ಉದ್ಘಾಟಿಸಿ ಮಾತನಾಡಿದ ಅವರು, ಮಾಹಿತಿ ತಂತ್ರಜ್ಞಾನದ ಈ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಜ್ಞಾನಾರ್ಜನೆಯೊಂದಿಗೆ ಜೀವನದ ಗುರಿ ತಲುಪಲು ಕರೆಕೊಟ್ಟರು.
ಕುಶಾಲನಗರದ ವಿವೇಕಾನಂದ ವಿದ್ಯಾಸಂಸ್ಥೆಯ ಅಧ್ಯಕ್ಷ ಎನ್.ಎನ್.ಶಂಭುಲಿಂಗಪ್ಪ, ಕೊಡಗು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಫಿಲಿಪ್ ವಾಸ್, ವಿವೇಕಾನಂದ ಪಿಯು ಕಾಲೇಜಿನ ಪ್ರಾಂಶುಪಾಲೆ ಕ್ಲಾರಾ ರೇಷ್ಮಾ, ಮಹಾತ್ಮಗಾಂಧಿ ಪದವಿ ಕಾಲೇಜಿನ ಪ್ರಾಂಶುಪಾಲೆ ಟಿ.ಎ.ಲಿಖಿತಾ ಇದ್ದರು.
ಕಾರ್ಯಕ್ರಮದ ಬಳಿಕ ಕಾಲೇಜಿನ ವಿದ್ಯಾರ್ಥಿಗಳಿಂದ ಕೈಬರಹದ ಸ್ಪರ್ಧೆ, ಬೆಂಕಿ ಇಲ್ಲದೆ ಆಹಾರ ತಯಾರಿಸುವ ಸ್ಪರ್ಧೆ, ವಸ್ತ್ರ ವಿನ್ಯಾಸ, ನೃತ್ಯ, ಛಾಯಾ ಬಿಂಬ, ಚರ್ಚಾ ಸ್ಪರ್ಧೆ, ಆಶುಭಾಷಣ, ಕಸದಿಂದ ರಸ ಹೀಗೆ ಭಿನ್ನ ವಿಭಿನ್ನ ಸ್ಪರ್ಧೆಗಳು ನಡೆದವು.
ಕಾಲೇಜಿನ ಕನ್ನಡ ಉಪನ್ಯಾಸಕ ಮಂಜೇಶ್ ಸ್ವಾಗತಿಸಿ ವಂದಿಸಿದರು.
Back to top button
error: Content is protected !!