ಕುಶಾಲನಗರ, ಫೆ 02:ಮಡಿಕೇರಿ ನಗರದಲ್ಲಿ ಆನಧಿಕೃತವಾಗಿ ವಾಹನಗಳ ಮೂಲ ಸ್ವರೂಪವನ್ನು ಬದಾಯಿಸಿಕೊಂಡು ಕರ್ಕಶ ಶಬ್ದ ಬರುವ ಸೈಲೆನ್ಸರನ್ನು ಅಳವಡಿಸಿಕೊಂಡು ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡಿಕೊಂಡು ವಾಹನಗಳು ಸಂಚರಿಸುತ್ತಿರುವುದಾಗಿ ಹಾಗೂ ಸಂಖ್ಯೆ ಕೆಎ 01ಎನ್ ಜಿ 2730 ರ ಜಿಪ್ಸಿ ವಾಹನವು ಮಡಿಕೇರಿ ನಗರದಲ್ಲಿ ಕರ್ಕಶ ಶಬ್ದ ಮಾಡಿಕೊಂಡು ರೇಸಿಂಗ್ ಸ್ಪೀಡ್ ನಲ್ಲಿ ಅಪಾಯಕರ ರೀತಿಯಲ್ಲಿ ಸಂಚರಿಸುತ್ತಿರುವುದಾಗಿ ಸಾರ್ವಜನಿಕರಿಂದ ಮಾಹಿತಿ ಬಂದಿದ್ದು, ಮೈತ್ರಿ ಜಂಕ್ಷನ್ ಬಳಿ ಎಫ್.ಎಂ.ಸಿ. ಕಾಲೇಜು ಕಡೆಯಿಂದ ನಗರದ ಕಡೆಗೆ ಕೆಎ01 ಎನ್ ಜಿ2730 ರ ಜಿಪ್ಸಿ ವಾಹನವನ್ನು ಅದರ ಚಾಲಕ ಅತಿ ವೇಗವಾಗಿ ಸೈಲೆನ್ಸರ್ನಲ್ಲಿ ಕರ್ಕಶ ಶಬ್ದ ಮಾಡಿಕೊಂಡು ಅಪಾಯಕರ ರೀತಿಯಲ್ಲಿ ಚಾಲನೆ ಮಾಡಿಕೊಂಡು ಬರುತ್ತಿರುವುದು ಗಮನಿಸಿ ಜೀಪನ್ನು ಬದಿಗೆ ನಿಲ್ಲಿಸಿ ಸದರಿ ವಾಹನವನ್ನು ತಡೆದು ಪರಿಶೀಲಿಸಿದಾಗ ಸದರಿ ಜಿಪ್ಸಿಯ ಮೂಲ ಸ್ವರೂಪವನ್ನು ಪರಿವರ್ತಿಸಿಕೊಂಡು ಕರ್ಕಶ ಶಬ್ದ ಬರುವ ಸೈಲೆನ್ಸರನ್ನು ಅಳವಡಿಸಿಕೊಂಡು ಚಾಲನೆ ಮಾಡುತ್ತಿರುವುದು ಕಂಡು ಬಂದಿರುತ್ತದೆ.
ಸದರಿ ಜಿಪ್ಸಿ ಚಾಲಕ ಜಿಪ್ಸಿ ವಾಹನದ ಮೂಲ ಸ್ವರೂಪವನ್ನು ಬದಲಾಯಿಸಲು ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಅನುಮತಿಯನ್ನು ಪಡೆದುಕೊಂಡಿರುತ್ತೀರಾ ಎಂದು ಕೇಳಿದಾಗ ಯಾವುದೆ? ಅನುಮತಿಯನ್ನು ಪಡೆದುಕೊಂಡಿರುವುದಿಲ್ಲ ಎಂದು ತಿಳಿಸಿದ ಮೇರೆಗೆ ಮುಂದಿನ ಕ್ರಮದ ಬಗ್ಗೆ ಸದರಿ ವಾಹನವನ್ನು ವಶಕ್ಕೆ ಪಡೆದುಕೊಂಡು ಮಡಿಕೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಲಂ: 281 2.2.2.-2023, 5/2. 52, 53(1), 192, 184, 189 ಐಎಂವಿ ಆಕ್ಟ್ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿರುತ್ತದೆ.
ಯಾವುದೇ ವಾಹನಗಳ ಆರ್.ಸಿ. ನಿಯಮಗಳನ್ನು ಉಲ್ಲಂಘನೆ ಮಾಡಿ ಆನಧಿಕೃತವಾಗಿ ವಾಹನಗಳ ಮೂಲ ಸ್ವರೂಪವನ್ನು ಬದಲಾವಣೆ ಮಾಡುವುದು ಅಥವಾ ಕರ್ಕಶ ಶಬ್ದ ಉಂಟುಮಾಡುವ ಸೈಲೆನ್ಸರ್, ಹಾರ್ನ್ ಗಳನ್ನು ಅಳವಡಿಸಿಕೊಳ್ಳುವುದು, ವೀಲಿಂಗ್ ಮಾಡಿಕೊಂಡು ಚಾಲನೆ ಮಾಡುವವರನ್ನು ಪತ್ತೆಹಚ್ಚಿ ಪ್ರಕರಣ ದಾಖಲಿಸಲು ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕೆಂದು ಪೊಲೀಸ್ ಅಧೀಕ್ಷಕರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿರುತ್ತಾರೆ.