ಕ್ರೈಂ

ಸಚಿವರ ಆಪ್ತ ಸಹಾಯಕನ‌ ಹೆಸರಿನಲ್ಲಿ ವಂಚನೆ: ಇಬ್ಬರ ಬಂಧನ

 

ಕುಶಾಲನಗರ, ನ‌ 22: ಕುಶಾಲನಗರ ತಾಲ್ಲೂಕಿನ ಕಂದಾಯ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಎಚ್.ಎನ್.ಸಂತೋಷ್ ಅವರಿಂದ ಸಚಿವರ ಆಪ್ತ ಸಹಾಯಕನ‌ ಹೆಸರಿನಲ್ಲಿ ಹಣ ವಂಚಿಸಿದ ಪ್ರಕರಣ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.

ನ: 19-11- 2023 ರಂದು ರಾತ್ರಿ ಸುಮಾರು 09.00 ಘಂಟೆ ಸಮಯದಲ್ಲಿ ಅಪರಿಚಿತ ವ್ಯಕ್ತಿಯು ಮೊಬೈಲ್‌ಗೆ ಕರೆ ಮಾಡಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ರವರ ಆಪ್ತ ಸಹಾಯಕ ಎಂದು ಹೇಳಿಕೊಂಡು ತುರ್ತಾಗಿ ರೂ. 20,000‌ ರೂಗಳ ಹಣದ ಅವಶ್ಯಕತೆಯಿದ್ದು, ಗೂಗಲ್ ಪೇ ಮೂಲಕ ಕಳುಹಿಸುವಂತೆ ಹಾಗೂ ಹಣವನ್ನು ಆದಷ್ಟು ಬೇಗ ಹಿಂದಿರುಗಿಸುವುದಾಗಿ ಎಂದು ಹೇಳಿದ್ದರಿಂದ, ಅಪರಿಚಿತ ವ್ಯಕ್ತಿಗೆ ಕಂದಾಯ ನಿರೀಕ್ಷಕರು ರೂ.20,000 ರೂಗಳ ಹಣವನ್ನು ಗೂಗಲ್ ಪೇ ಮೂಲಕ ಕಳುಹಿಸಿದ್ದಾರೆ. ಈ ಕುರಿತು ದಿ: 20-11 ರಂದು ಸಚಿವರ ಕಛೇರಿಯಲ್ಲಿ ವಿಚಾರಿಸಿದ್ದು ಹಣ ಕೇಳಿದ ವ್ಯಕ್ತಿ ಹಾಗೂ ಮೊಬೈಲ್ ಸಂಖ್ಯೆಗೆ ಬಗ್ಗೆ ಯಾವುದೇ ಮಾಹಿತಿ ಇರುವುದಿಲ್ಲ ಎಂದು ತಿಳಿಸಿರುವ ಕುರಿತು ದೂರು ಸ್ವೀಕರಿಸಿದ್ದು, ಡಿವೈಎಸ್ಪಿ ಆರ್.ವಿ ಗಂಗಾಧರಪ್ಪ, ಸಿಐ ಪ್ರಕಾಶ್.ಬಿ.ಜಿ, ಪಿಎಸ್ಐಗಳಾದ ಗೀತಾ, ಕಾಶಿನಾಥ ಬಗಲಿ ಮತ್ತು ಸಿಬ್ಬಂದಿಗಳ ತಂಡ ಘಟನೆ ಸ್ಥಳಕ್ಕೆ ಭೇಟಿ ನೀಡಿ ಅಪರಾಧ ಕೃತ್ಯಕ್ಕೆ ಸಂಬಂಧಿಸಿದ ಮಾಹಿತಿ, ಸಾಕ್ಷ್ಯಾಧರಗಳನ್ನು ಕಲೆಹಾಕಿ ತನಿಖೆ ಕೈಗೊಂಡು ನ. 2 ರಂದು ಆರೋಪಿಗಳಾದ ಮೈಸೂರು ನಿವಾಸಿ ರಘುನಾಥ (34 ವರ್ಷ) ಮತ್ತು ಶಿವಮೂರ್ತಿ, (35 ವರ್ಷ) ಎಂಬವರನ್ನು ದಸ್ತಗಿರಿ ಮಾಡಿ ಕ್ರಮ ಕೈಗೊಳ್ಳಲಾಗಿರುತ್ತದೆ.

ಸಚಿವರ ಆಪ್ತಸಹಾಯಕರು ಅಥವಾ ಕಛೇರಿ ಹೆಸರಿನಲ್ಲಿ ಕರೆ ಮಾಡಿ ಹಣಕ್ಕೆ ಬೇಡಿಕೆ ನೀಡಿದ ವ್ಯಕ್ತಿಗಳ ಮೇಲೆ ಸೂಕ್ತ ಕಠಿಣ ಕ್ರಮ ಕೈಗೊಳ್ಳುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಪೊಲೀಸ್ ಅಧೀಕ್ಷಕರಿಗೆ ಸೂಚನೆಗಳನ್ನು ನೀಡಿರುತ್ತಾರೆ.

ಹಣಕ್ಕೆ ಬೇಡಿಕೆ ನೀಡುವ ವ್ಯಕ್ತಿಗಳ ಕುರಿತು ಮಾಹಿತಿ ಇದ್ದಲ್ಲಿ ಸ್ಥಳೀಯ ಪೊಲೀಸ್ ಠಾಣೆ/ ತುರ್ತು ಸಹಾಯವಾಣಿ 112 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಪೊಲೀಸರು ಕೋರಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!