ಕುಶಾಲನಗರ, ನ 23: ಸೇವಾ ಮನೋಭಾವದ ಸಮಾಜ ಸೇವೆಗಾಗಿ ಪಾಲಿಬೆಟ್ಟದ ಮೂಕೊಂಡ ವಿಜು ಸುಬ್ರಮಣಿ ಅವರು ಸುವರ್ಣ ಕರ್ನಾಟಕ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿ ಮಾಜಿ ಅಧ್ಯಕ್ಷರು ಹಾಗೂ ಸದಸ್ಯರಾಗಿ ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡು ಪರಿಸರ ಕಾಳಜಿಯೊಂದಿಗೆ ಕ್ರೀಡೆ, ಶಿಕ್ಷಣ,ಆರೋಗ್ಯ ಸೇರಿದಂತೆ ಸಂಕಷ್ಟದಲ್ಲಿರುವವರಿಗೆ ನೆರವಾಗುವ ಮೂಲಕ ನಿರಂತರ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ವಿಜು ಸುಬ್ರಮಣಿಯವರ ಸಮಾಜ ಸೇವಾ ಸಾಧನೆಗಾಗಿ ಗುರುತಿಸಿ ರಾಜ್ಯ ಪ್ರಶಸ್ತಿ ವಿತರಣೆ ಮಾಡಿ ಗೌರವಿಸಿದ್ದಾರೆ.
ಬೆಂಗಳೂರಿನ ಕಳತ್ತೂರು ಕಲ್ಯಾಣ ಮಂಟಪದಲ್ಲಿ ನಡೆದ ಅಂತರಾಷ್ಟ್ರೀಯ ಪಂಡಿತ್ ದಿನೇಶ್ ಗುರೂಜಿ ಅವರ ಸಂಸ್ಥೆಯ 4ನೇ ರಾಜ್ಯಮಟ್ಟದ ಜ್ಯೋತಿಷ್ಯ ಹಾಗೂ ಸಾಧಕ ಸಮಾವೇಶದಲ್ಲಿ ರಾಜ್ಯದ ಹಲವು ಜಿಲ್ಲೆಗಳ ವಿವಿಧ ಕ್ಷೇತ್ರದ ಕ್ರೀಡೆ, ಶಿಕ್ಷಣ, ಆರೋಗ್ಯ, ಕೃಷಿ, ಕಲೆ, ಸಾಹಿತ್ಯ, ಸಂಗೀತ, ನೃತ್ಯ ಹಾಗೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಸಾಧನೆ ಮಾಡಿದವರನ್ನ ಗುರುತಿಸಿ ರಾಜ್ಯ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಚಲನಚಿತ್ರ ಅಂತರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಾಗಿಣಿ ಭರಣ,
ಪಂಡಿತ್ ದಿನೇಶ್ ಗುರೂಜಿ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು
Back to top button
error: Content is protected !!