ಕುಶಾಲನಗರ ನ 23: ಕೂಡಿಗೆ ಗ್ರಾಮ ಪಂಚಾಯತಿಯ 2023-24 ನೇ ಸಾಲಿನ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿಗಳ ಕ್ರಿಯಾ ಯೋಜನೆಗೆ ಸಂಬಂಧಿಸಿದ ವಿಶೇಷ ಗ್ರಾಮ ಸಭೆಯು ಅಧ್ಯಕ್ಷ ಕೆ. ಟಿ ಗಿರೀಶ್ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಕೈಗೊಳ್ಳುವ ವಿವಿಧ ಕಾಮಗಾರಿಗಳ ಬಗ್ಗೆ ಚರ್ಚೆಗಳು ಸೇರಿದಂತೆ ಮುಂದಿನ ದಿನಗಳಲ್ಲಿ ಕಾಮಗಾರಿಗಳನ್ನು ಆರಂಭ ಮಾಡುವುದಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರ ಸಮ್ಮುಖದಲ್ಲಿ ಕಾಮಗಾರಿಗಳ ಸೇರ್ಪಡೆ, ಕ್ರಿಯಾಯೋಜನೆ ಅನುಮೋದನೆ ಸೇರಿದಂತೆ ಅಭಿವೃದ್ಧಿಗೆ ಪೂರಕವಾದ ಚರ್ಚೆಗಳು ಸಭೆಯಲ್ಲಿ ನಡೆದವು.
ಅಧ್ಯಕ್ಷತೆ ವಹಿಸಿದ್ದ ಕೆ.ಟಿ. ಗಿರೀಶ್ ಮಾತನಾಡಿ, ಗ್ರಾಮಸ್ಥರು ಉದ್ಯೋಗ ಖಾತರಿ ಯೋಜನೆಯಲ್ಲಿ ತಮ್ಮ ಹೆಸರು ನೊಂದಣಿ ಮಾಡಿಕೊಂಡು ಅದರ ಮೂಲಕ ತಮ್ಮ ತಮ್ಮ ವ್ಯಾಪ್ತಿಯ ಕಾಮಗಾರಿಗಳನ್ನು ನಿರ್ವಹಿಸುವಂತೆ ಮನವಿ ಮಾಡಿದರು.
ಈ ಯೋಜನೆಯ ಅಡಿಯಲ್ಲಿ ವಿವಿಧ ಉತ್ತಮವಾದ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶ ಇರುವುದರಿಂದ ಗ್ರಾಮಸ್ಥರು ಭಾಗಿಯಾಗಿ ಅಭಿವೃದ್ಧಿಗೆ ಸಹಕಾರ ನೀಡುವಂತೆ ಕೋರಿದರು.
ಸಭೆಯ ನೋಡಲ್ ಅಧಿಕಾರಿಯಾಗಿ ಸೋಮವಾರಪೇಟೆ ತಾಲ್ಲೂಕಿನ ಕೃಷಿ ಸಹಾಯಕ ನಿರ್ದೇಶಕ ಯಾದವ್ ಬಾಬು ಕಾರ್ಯನಿರ್ವಹಿಸಿದರು.
ಸಭೆಯಲ್ಲಿ ಗ್ರಾಪಂ ಉಪಾಧ್ಯಕ್ಷೆ ಜಯಶ್ರೀ, ಸದಸ್ಯರಾದ ಮೋಹಿನಿ ತಮ್ಮಣ್ಣೇಗೌಡ, ಮಂಗಳಾ, ಜಯಶೀಲಾ, ಅಭಿವೃದ್ಧಿ ಅಧಿಕಾರಿ ಮಂಜಳಾ, ಕಾರ್ಯದರ್ಶಿ ಪುನಿತ್, ಸೇರಿದಂತೆ ವಿವಿಧ ಗ್ರಾಮಗಳ ಗ್ರಾಮಸ್ಥರು ಹಾಜರಿದ್ದರು.
Back to top button
error: Content is protected !!