ಕುಶಾಲನಗರ, ನ 24: ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ರವರ ಮನವಿಯ ಮೇರೆಗೆ ಪಂಚಾಯಿತಿ ನೂತನ ಕಟ್ಟಡಕ್ಕಾಗಿ ಹೊಸದಾಗಿ ಗುರುತಿಸಿರುವ ಕೃಷಿ ಇಲಾಖೆ ಜಾಗವನ್ನು ಕೊಡಗು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ಮಾಡಿ ಸರ್ಕಾರಕ್ಕೆ ಈ ಕುರಿತು ಮನವಿ ಸಲ್ಲಿಸುವುದಾಗಿ ಭರವಸೆ ನೀಡಿದರು.
ಈ ಕುರಿತು ಮಾತನಾಡಿದ ಅಧ್ಯಕ್ಷ ಭಾಸ್ಕರ್ ನಾಯಕ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಕಟ್ಟಡವು ರಸ್ತೆ ಮಾರ್ಜಿನ್ ನಲ್ಲಿದ್ದು ಮುಂದಿನ ದಿನಗಳಲ್ಲಿ ರಸ್ತೆ ಅಗಲೀಕರಣ ಸಂದರ್ಭದಲ್ಲಿ ಕಟ್ಟಡವು ತೆರವುಗೊಳಿಸ ಬೇಕಾಗುವ ಸಂದರ್ಭ ಬರಬಹುದಾಗಿರುವುದರಿಂದ ಈಗಾಗಲೇ ಕೃಷಿ ಇಲಾಖೆಯ ಜಾಗವನ್ನು ಗುರುತಿಸುವುದರಿಂದ ಸದರಿ ಜಾಗವನ್ನು ಗ್ರಾಮ ಪಂಚಾಯಿತಿ ಹೆಸರಿಗೆ ವರ್ಗಾಯಿಸಿಕೊಳ್ಳಲು ಬೇಕಾದ ಪ್ರಯತ್ನಗಳನ್ನು ಮಾಡುತ್ತಿದ್ದು ಈ ಕುರಿತು ಕ್ಷೇತ್ರದ ಶಾಸಕರಲ್ಲಿ ಮನವಿ ಸಲ್ಲಿಸಲು ಈಗಾಗಲೇ ಸಾಮಾನ್ಯ ಸಭೆಯಲ್ಲಿ ತೀರ್ಮಾನ ಮಾಡಿದ್ದು ಒಂದೆರಡು ದಿನಗಳಲ್ಲಿ ಪಂಚಾಯತಿ ಆಡಳಿತ ಮಂಡಳಿಯೊಂದಿಗೆ ಶಾಸಕರು ಮತ್ತು ಸಂಬಂಧಪಟ್ಟ ಇಲಾಖೆ ಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭ ಜಿ.ಪಂ.ಉಪಕಾರ್ಯದರ್ಶಿ ಜಿ.ಧನರಾಜು, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಜಯಣ್ಣ, ಗ್ರಾ.ಪಂ.ಪಿಡಿಒ ಸಂತೋಷ್, ಅವಿನಾಶ್ ಇತರರು ಇದ್ದರು.
Back to top button
error: Content is protected !!