ಸುದ್ದಿಗೋಷ್ಠಿ

ಕುಶಾಲನಗರ ಗೌಡ ಸಮಾಜ ಮತ್ತು ಅಂಗಸಂಸ್ಥೆಗಳ ಆಶ್ರಯದಲ್ಲಿ 27 ರಂದು ಹುತ್ತರಿ ಆಚರಣೆ

ನಕಲಿ ಐಟಿ ಅಧಿಕಾರಿಗಳ ವಿರುದ್ದ ಸೂಕ್ತ ಕ್ರಮಕ್ಕೆ‌ ಗೌಡ‌ ಸಮಾಜ‌ ಒತ್ತಾಯ

ಕುಶಾಲನಗರ, ನ. 24: ಕುಶಾಲನಗರದ ಗೌಡ ಸಮಾಜ ಮತ್ತು ಅಂಗಸಂಸ್ಥೆಗಳ ಆಶ್ರಯದಲ್ಲಿ ನ.27 ರಂದು ಹುತ್ತರಿ ಆಚರಣೆ ವಿಜೃಂಭಣೆಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಕುಶಾಲನಗರ ಗೌಡ ಸಮಾಜದ ಅಧ್ಯಕ್ಷ ಚಿಲ್ಲನ ಗಣಿಪ್ರಸಾದ್ ತಿಳಿಸಿದರು.

ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಹಬ್ಬದ ಆಚರಣೆ ಬಗ್ಗೆ ಮಾಹಿತಿ‌ ನೀಡಿದ ಅವರು‌, ಅಂದು‌ ಸಂಜೆ 7.45ಕ್ಕೆ ದೇವರಿಗೆ ಪೂಜೆ ಸಲ್ಲಿಸಿ‌ ನೆರೆಕಟ್ಟಿ ಮೆರವಣಿಗೆಯಲ್ಲಿ ಗಣಪತಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿ, ಗುಮ್ಮನಕೊಲ್ಲಿಯಲ್ಲಿ ಗೌಡ ಯುವಕ ಸಂಘದ ಗದ್ದೆಯಲ್ಲಿ ರಾತ್ರಿ

8.45 ಕ್ಕೆ ಗದ್ದೆಗೆ ಪೂಜೆ ಸಲ್ಲಿಸಿ ಸಾಂಪ್ರದಾಯಿಕವಾಗಿ ಕದಿರು ತೆಗೆದು ಜನಾಂಗದವರಿಗೆ, ಸಾರ್ವಜನಿಕರಿಗೆ ವಿತರಿಸಲಾಗುವುದು ಎಂದು ತಿಳಿಸಿದರು.

ಗೌಡ ಯುವಕ ಸಂಘದ ಅಧ್ಯಕ್ಷ ಕೊಡಗನ ಹರ್ಷ ಮಾತನಾಡಿ, ನಾಲ್ಕು ಗದ್ದೆಗಳಲ್ಲಿ ಕದಿರಿ ಬೆಳೆಯಲಾಗಿದ್ದು ಸಾರ್ವಜನಿಕರು ನೂಕುನುಗ್ಗಲಿಲ್ಲದೆ ಕದಿರು ಪಡೆದುಕೊಳ್ಳಲು ಸೂಚಿಸಿದರು.

ಇದೇ ಸಂದರ್ಭ ಕುಶಾಲನಗರದ ದಂತ ವೈದ್ಯ ದೇವರಗುಂಡ ಪ್ರವೀಣ್ ಅವರ ಮನೆಗೆ‌ ಐಟಿ ಅಧಿಕಾರಿಗಳ ಹೆಸರಿನಲ್ಲಿ‌ ಅತಿಕ್ರಮ ಪ್ರವೇಶ ಮಾಡಿದ ಆರೋಪಿಗಳ ವಿರುದ್ದ ಪೊಲೀಸರು ಸೂಕ್ತ ಕ್ರಮ‌ಕೈಗೊಳ್ಳಬೇಕಿದೆ. ಯಾವುದೇ ರಾಜಕೀಯ ಒತ್ತಡಕ್ಕೆ‌ ಮಣಿಯದೆ ಕಠಿಣ‌ ಕ್ರಮ ಜರುಗಿಸಬೇಕು. ತಪ್ಪಿದಲ್ಲಿ ಗೌಡ ಸಮಾಜದ ವತಿಯಿಂದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದರು.

ಗೋಷ್ಠಿಯಲ್ಲಿ ಉಪಾಧ್ಯಕ್ಷ ಸೆಟ್ಟೆಜನ ದೊರೆ ಗಣಪತಿ, ಕಾರ್ಯದರ್ಶಿ ಕುಲ್ಲಚನ ಹೇಮಂತ್, ಗೌಡ ಯುವಕ ಸಂಘದ ಅಧ್ಯಕ್ಷ ಕೊಡಗನ ಹರ್ಷ, ಗೌಡ ಮಹಿಳಾ ಸ್ವಸಹಾಯ ಸಂಘದ ಅಧ್ಯಕ್ಷೆ ಸೂದನ‌ ಲಲಿತಾ ಗಣೇಶ್, ಸಮಾಜದ ಸಹ ಕಾರ್ಯದರ್ಶಿ, ದಬ್ಬಡ್ಕ ಡಾಟಿ ಶಾಂತಕುಮಾರಿ ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!