ಕುಶಾಲನಗರ, ನ 25: ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮ 50 ಅಂಗವಾಗಿ ಬಾನುವಾರ ಪಟ್ಟಣದ ರಥ ಬೀದಿಯಲ್ಲಿ ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ಯಾರು ಬೇಕಾದರೂ ಸ್ಪರ್ಧೆಯಲ್ಲಿ ಭಾಗವಹಿಸಲು ಮುಕ್ತ ಅವಕಾಶ ಕಲ್ಪಿಸಲಾಗಿದೆ ಎಂದು ಕಾರ್ಯದರ್ಶಿ ಎಸ್.ನಾಗರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ಪರ್ಧೆಯು ಸಂಜೆ 4 ಗಂಟೆಗೆ ಆರಂಭವಾಗಲಿದೆ. ಉದ್ಘಾಟನೆಯನ್ನು ಕೊಡಗು ಜಿಲ್ಲಾ ಕಸಾಪ ಪ್ರಧಾನ ಕಾರ್ಯದರ್ಶಿ ಮುನೀರ್ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ತಾಲೂಕು ಕಸಾಪ ಅಧ್ಯಕ್ಷ ಕೆ.ಎಸ್.ನಾಗೇಶ್ ವಹಿಸಲಿದ್ದಾರೆ. ಅತಿಥಿಗಳಾಗಿ ಕೆ.ಜೆ.ಚಿನ್ನಸ್ವಾಮಿ, ವಿ.ವಿ.ನಾಗೇಂದ್ರ ಶೆಟ್ಟಿ, ಎಸ್.ಕೆ.ಸತೀಶ, ಎಸ್.ಎಲ್.ಶ್ರೀಪತಿ, ಎಸ್.ಎನ್.ರಾಜೇಂದ್ರ ಆಗಮಿಸಲಿದ್ದಾರೆ.
ಮಹಿಳಾ ಕಾರ್ಯದರ್ಶಿ ಟಿ.ವಿ.ಶೈಲಾ, ಖಜಾಂಚಿ ಕೆ.ವಿ.ಉಮೇಶ್ ಇರಲಿದ್ದಾರೆ ಎಂದು ತಿಳಿಸಿದ್ದಾರೆ.
Back to top button
error: Content is protected !!