ಕಾರ್ಯಕ್ರಮ

ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮ

ಕುಶಾಲನಗರ ನ 26:  ಎನ್.ಸಿ.ಸಿ ತರಬೇತಿಯಲ್ಲಿ ವಿದ್ಯಾರ್ಥಿಗಳಿಗೆ ಶಿಸ್ತುಬದ್ಧ ಜೀವನವನ್ನು ಅನುಸರಿಸುವುದನ್ನು ಕಲಿಸಲಾಗುತ್ತದೆ ಎಂದು ನಿವೃತ್ತ ಯೋಧ ಜನಾರ್ಧನ್ ಹೇಳಿದರು.
ಎನ್.ಸಿ.ಸಿ. ರಾಷ್ಟ್ರೀಯ ದಿವಸ್ ಅಂಗವಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜು. ಫ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎನ್.ಸಿ.ಸಿ ತರಬೇತಿಯಿಂದ ವಿದ್ಯಾರ್ಥಿಗಳಲ್ಲಿ ದೇಶಭಕ್ತಿಯನ್ನು ಬೆಳೆಸುತ್ತದೆ. ಸತತ ಪ್ರಯತ್ನ, ಪರಿಶ್ರಮದಿಂದ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಹಿತ ನುಡಿಯನ್ನು ಹೇಳಿದರು.
ಶಾಲೆಯ ಉಪ ಪ್ರಾಂಶುಪಾಲ ಪರಮೇಶ್ವರಪ್ಪ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಬಹಳ ಮುಖ್ಯ. ಶಿಸ್ತಿನ ವಿದ್ಯಾರ್ಥಿ ಜೀವನದಲ್ಲಿ ಸಕಾರಾತ್ಮಕ ದೃಷ್ಟಿಕೋನವನ್ನು ಹೊಂದಿರುತ್ತಾನೆ. ಶಿಸ್ತು ಯಾವಾಗಲೂ ವಿದ್ಯಾರ್ಥಿಯ ಗುರಿಗಳ ಮೇಲೆ ಕೇಂದ್ರೀಕರಿಸಲು ಮಾರ್ಗದರ್ಶಿಯಾಗಿ ಕಾರ್ಯನಿರ್ವಹಿಸುತ್ತದೆ. ಶಿಸ್ತಿನ ವಿದ್ಯಾರ್ಥಿ ತನ್ನ ಗುರಿಯಿಂದ ಎಂದಿಗೂ ವಿಚಲನಗೊಳ್ಳುವುದಿಲ್ಲ ಮತ್ತು ಇದರಿಂದಾಗಿ ವಿದ್ಯಾರ್ಥಿಗಳು ತಮ್ಮ ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಯಶಸ್ಸನ್ನು ಸಾಧಿಸುತ್ತಾರೆ ಎಂದರು.
ದೈಹಿಕ ಶಿಕ್ಷಣಾಧಿಕಾರಿ ಸದಾಶಿವಯ್ಯ ಎಸ್ ಪಲ್ಲೇದ್ ಮಾತನಾಡಿ, ವಿದ್ಯಾರ್ಥಿಗಳು ದೇಶದ ಅಮೂಲ್ಯ ಸಂಪತ್ತು, ಮಕ್ಕಳ ಭವಿಷ್ಯ ಪ್ರಜ್ವಲಿಸಲು ಶಿಕ್ಷಣವೆಂಬ ಬೆಳಕಿನ ಅವಶ್ಯವಿದೆ, ಅಲ್ಲದೇ ಪ್ರಸ್ತುತ ದಿನಗಳಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿಯೂ ಸ್ಪರ್ಧೆ ಏರ್ಪಟ್ಟಿದ್ದು ದಿನಕ್ಕೊಂದು ನೂತನ ಅವಿಷ್ಕಾರಗಳಾಗುತ್ತಿವೆ. ಯುವಕರು ದೇಶಸೇವೆ ಸಲ್ಲಿಸಲು ಮುಂದೆ ಬರಬೇಕು ಇದು ಹೆಮ್ಮೆಯ ಕೆಲಸ‘ ಎಂದರು.
ಇದೆ ಸಂದರ್ಭ ಎನ್.ಸಿ.ಸಿ ಮಕ್ಕಳಿಗೆ ಸಮವಸ್ತ್ರ ವಿತರಿಸಲಾಯಿತು.
ಈ ಸಂದರ್ಭ ಎನ್.ಸಿ.ಸಿ. ಕೇರ್ ಟೇಕರ್ ಆಫೀಸರ್ ಮಹೇಂದ್ರ ಎಂ.ಎಸ್, ಚಂದ್ರು ಸೇರಿದಂತೆ ಶಿಕ್ಷಕ ವೃಂದದವರು ಮತ್ತು ಮಕ್ಕಳ ಪೋಷಕರು ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!