ಕುಶಾಲನಗರ ನ 28:
ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ದೇವಾಲಯ ಸಮಿತಿಯ ವತಿಯಿಂದ ಶ್ರಧ್ಧಾಭಕ್ತಿಯಿಂದ ಹುತ್ತರಿ ಹಬ್ಬ ಆಚರಣೆ ನಡೆಯಿತು.
ದೇವಾಲಯ ಸಮೀಪದ ಗದ್ದೆಯಲ್ಲಿ ಸಂಪ್ರದಾಯದಂತೆ ವಿಶೇಷ ಪೂಜಾ ಕೈಂಕರ್ಯಗಳನ್ನು ದೇವಾಲಯ ಅರ್ಚಕ ಕೃಷ್ಣಮೂರ್ತಿ ನೆರವೇರಿಸಿ ನಂತರ ಭತ್ತದ ಕದಿರುಗಳನ್ನು ದೇವಾಲಯಕ್ಕೆ ತಂದು ಅದಕ್ಕೆ ವಿವಿಧ ಎಲೆಗಳನ್ನು ಕಟ್ಟಿದ ನಂತರ ದೇವಾಲಯದಲ್ಲಿ ಪೂಜೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಹುದುಗೂರು ಮದಲಾಪುರ, ಹಾರಂಗಿ ,ಕೂಡಿಗೆ, ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ನೂರಾರು ಭಕ್ತರು ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ದೇವಾಲಯ ಸಮಿತಿಯ ಅಧ್ಯಕ್ಷ ಟಿ. ಎಂ. ಚಾಮಿ, ಕಾರ್ಯದರ್ಶಿ ಸುರೇಶ್ ಸೇರಿದಂತೆ ಸಮಿತಿಯ ನಿರ್ದೇಶಕರು, ಸದಸ್ಯರು ಹಾಜರಿದ್ದರು.
28 ಕೆಯುಎಸ್ 04 ಚಿತ್ರದಲ್ಲಿ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ದೇವಾಲಯ ಸಮಿತಿಯ ವತಿಯಿಂದ ಹುತ್ತರಿ ಹಬ್ಬ ಆಚರಣೆ ನಡೆಯಿತು.
Back to top button
error: Content is protected !!