ವಿಶೇಷ
ನಾಪಂಡ ಮುತ್ತಪ್ಪ, ನಾಪಂಡ ಮುದ್ದಪ್ಪ ಸಹೋದರರ ಅದ್ದೂರಿ ಹುಟ್ಟುಹಬ್ಬ ಕಾರ್ಯಕ್ರಮ


ಕುಶಾಲನಗರ, ನ 04: ಕಾಂಗ್ರೆಸ್ ಮುಖಂಡರು, ಸಮಾಜ ಸೇವಕರು, ಉದ್ಯಮಿಗಳಾದ ನಾಪಂಡ ಮುತ್ತಪ್ಪ ಮುದ್ದಪ್ಪ ಸಹೋದರರ 51ನೇ ವರ್ಷದ ಹುಟ್ಟುಹಬ್ಬ ಕಾರ್ಯಕ್ರಮ ಕೂಡುಮಂಗಳೂರು ರಾಮೇಶ್ವರ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಾದ ಕೆ.ಕೆ.ನಾಗರಾಜ ಶೆಟ್ಟಿ, ಫ್ಯಾನ್ಸಿ ಮುತ್ತಣ್ಣ, ಮುನೀರ್, ಮುತ್ತಮ್ಮ, ಗುಲ್ಜಾರ್ ಮತ್ತಿತರರನ್ನು ಸನ್ಮಾನಿಸಿ ಗೌರವಿಸಲಾಯಿತು.