ಕುಶಾಲನಗರ ಡಿ.13: ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೂಡ್ಲೂರು ಕೈಗಾರಿಕಾ ಘಟಕದ ಆವರಣದಲ್ಲಿರುವ ಸೋಮವಾರಪೇಟೆ, ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ಮಹಿಳಾ ಪೂರಕ ಪೌಷ್ಟಿಕ ಅಹಾರ ಉತ್ಪಾದನಾ ಕೇಂದ್ರಕ್ಕೆ (ಎಂ.ಎಸ್. ಪಿ. ಸಿ.) ಕೂಡುಮಂಗಳೂರು ಗ್ರಾಮ ಪಂಚಾಯತಿ ಅಧ್ಯಕ್ಷ,ಸದಸ್ಯರು, ಅಭಿವೃದ್ಧಿ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೇಂದ್ರದಲ್ಲಿ ಎರಡು ತಾಲ್ಲೂಕು ವ್ಯಾಪ್ತಿಯ ಅಂಗನವಾಡಿ, ಮತ್ತು ಬಾಣಂತಿ ಮಹಿಳೆಯರಿಗೆ ನೀಡುವ ಪೌಷ್ಟಿಕ ಆಹಾರ ವಿತರಣೆಗೆ ಸಿದ್ದತೆ ಮಾಡುವ ಕೇಂದ್ರದ ವಸ್ತುಗಳನ್ನು ಪರಿಶೀಲನೆ ನಡೆಸಿದರು.
ಕೇಂದ್ರದಲ್ಲಿ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ, ಮತ್ತು ಉತ್ತಮ ಗುಣಮಟ್ಟದ ಅಹಾರ ಪದಾರ್ಥಗಳು ನೀಡುವಂತೆ ಅಲ್ಲಿನ ಸಿಬ್ಬಂದಿಗಳಿಗೆ ಅಧ್ಯಕ್ಷರು ತಿಳಿಸಿದರು.
ಈ ಸಂದರ್ಭದಲ್ಲಿ ಕೂಡುಮಂಗಳೂರು ಗ್ರಾಮ ಪಂಚಾಯತಿ ಅಧ್ಯಕ್ಷ ಭಾಸ್ಕರ್ ನಾಯಕ್, ಸದಸ್ಯರಾದ ಕೆ.ಕೆ. ಭೋಗಪ್ಪ, ಸೋಮವಾರಪೇಟೆ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಕೆ.ಜಿ ವಿಮಲ, ಅಭಿವೃದ್ಧಿ ಅಧಿಕಾರಿ ಸಂತೋಷ್ ಹಾಜರಿದ್ದರು.
Back to top button
error: Content is protected !!