ಕುಶಾಲನಗರ, ಜೂ ,೧೧: ಕುಶಾಲನಗರದ ಹೃದಯ ಭಾಗದಲ್ಲಿ ರೂ 6.50 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಪುರಸಭೆ ನೂತನ ಸಂಕೀರ್ಣವನ್ನು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಬುಧವಾರ ಲೋಕಾರ್ಪಣೆ ಗೊಳಿಸಿದರು.
ಈ ಸಂದರ್ಭ ಶಾಸಕ ಡಾ.ಮಂತರ್ ಗೌಡ, ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರ, ಜಿಲ್ಲಾಧಿಕಾರಿ ವೆಂಕಟ್ ರಾಜ, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ, ತಾಲೂಕು ಅಧ್ಯಕ್ಷ ವಿ.ಪಿ.ಶಶಿಧರ್, ಕುಡಾ ಅಧ್ಯಕ್ಷ ಪ್ರಮೋದ್ ಮುತ್ತಪ್ಪ ಸೇರಿದಂತೆ ಪುರಸಭೆ ಜನಪ್ರತಿನಿಧಿಗಳು, ಕಾಂಗ್ರೆಸ್ ಮುಖಂಡರು, ಸಂಘಸಂಸ್ಥೆಗಳ ಮುಖಂಡರು, ಉದ್ಯಮಿಗಳು, ಸಾರ್ವಜನಿಕರು ಹಾಜರಿದ್ದರು.
Back to top button
error: Content is protected !!