ಶಿಕ್ಷಣ

ಕೂಡಿಗೆಯಲ್ಲಿ ನಡೆದ ಕೆಇಎಸ್ ಕಿಶೋರ ಕೇಂದ್ರದ ಕಿಶೋರೋತ್ಸವ

ಸತ್ಪಜೆಗಳ ನಿರ್ಮಾಣಕ್ಕೆ ಶಿಕ್ಷಣ ಸಂಸ್ಥೆಗಳು ಅಡಿಪಾಯ: ಶ್ರೀ ಸದಾಶಿವ ಸ್ವಾಮೀಜಿ

ಕುಶಾಲನಗರ, ಡಿ. 25 ಸಮಾಜಕ್ಕೆ ಪೂರಕವಾಗುವ ವಿಷಯಗಳು, ಜೀವನ ಮೌಲ್ಯಗಳನ್ನು ಶಿಕ್ಷಣದೊಂದಿಗೆ ಕಲಿಸುವುದರ ಮೂಲಕ ವಿದ್ಯಾರ್ಥಿಗಳನ್ನು ಸತ್ಪ್ರಜೆಗಳನ್ನಾಗಿಸುವ ಜವಾಬ್ದಾರಿ ಶಿಕ್ಷಣ ಸಂಸ್ಥೆಗಳ‌ ಮೇಲಿದೆ ಎಂದು ಕೊಡ್ಲಿಪೇಟೆಯ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು.

ಅವರು ಕೂಡಿಗೆಯ‌ ಕೆಇಎಸ್ ಕಿಶೋರ ಕೇಂದ್ರದ ಕಿಶೋರೋತ್ಸವ 2023 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ ಮಾನವೀಯತೆ ಮನೆ ಮಾಡಿದರೆ ಮಾತ್ರ ಸಮಸ್ಯೆಗಳಿಗೆ ಪರಿಹಾರ ಸಾಧ್ಯ. ವಿದ್ಯಾರ್ಥಿಗಳ ಯಶಸ್ವಿಗೆ ಶಿಕ್ಷಣದ ಪ್ರಗತಿಗೆ ಪೋಷಕರ ಪಾತ್ರ ಅತಿ ಮುಖ್ಯವಾಗಿರುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ನಿರಂತರ ಅಧ್ಯಾಯಶೀಲತೆಯನ್ನು ಮೈಗೂಡಿಸಿಕೊಂಡುಉನ್ನತ ಶಿಕ್ಷಣ ಹೊಂದಿ ತಮ್ಮ ಭವಿಷ್ಯವನ್ನು ಉಜ್ವಲ ಗೊಳಿಸಿಕೊಳ್ಳಬೇಕಾಗಿದೆ. ಇದರ ಜೊತೆಯಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಮೂಲಕ ಅನುಭವ ಜ್ಞಾನವನ್ನು ಪಡೆಯಲು ಅನುಕೂಲವಾಗುತ್ತದೆ. ಪೋಷಕರು ವಿದ್ಯಾರ್ಥಿಗಳ ಮೇಲೆ ಒತ್ತಡವನ್ನು ಏರಬಾರದು ಎಂದು ಕಿವಿಮಾತು ಹೇಳಿದರು.
ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಎಸ್. ಎಲ್. ಭೋಜೇಗೌಡ ಮಾತನಾಡಿ, ಶಿಕ್ಷಣ ಸಂಸ್ಥೆಗಳ ಏಳಿಗೆಯಲ್ಲಿ ಪೋಷಕರ, ಶಿಕ್ಷಕರ, ಹಾಗೂ ವಿದ್ಯಾರ್ಥಿಗಳ ಪಾತ್ರ ಮಹತ್ವವಾದದ್ದು. ವಿದ್ಯಾರ್ಥಿಗಳು ಆತ್ಮವಿಶ್ವಾಸವನ್ನು ಮೈಗೂಡಿಸಿಕೊಂಡು, ಕಠಿಣ ಪರಿಶ್ರಮದೊಂದಿಗೆ ವಿದ್ಯಾಭ್ಯಾಸಕ್ಕೆ ಹೆಚ್ಚು ಗಮನ ನೀಡಿದಾಗ ಯಶಸ್ಸು ಕಾಣಬಹುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೂಡುಮಂಗಳೂರು ಗ್ರಾಮ ಪಂಚಾಯತಿ ಅಧ್ಯಕ್ಷ ಭಾಸ್ಕರ್ ನಾಯಕ್ ಮಾತಾನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ. ಇ. ಎಸ್. ವಿದ್ಯಾಸಂಸ್ಥೆಯ ಕಾರ್ಯದರ್ಶಿ ಉಮಾ ಪ್ರಭಾಕರ್ ವಹಿಸಿದ್ದರು. ವೇದಿಕೆಯಲ್ಲಿ ಚಿಕ್ಕ ಅಳುವಾರದ ಕೊಡಗು ವಿಶ್ವವಿದ್ಯಾಲಯ ನಿರ್ದೇಶಕ ಡಾ.ಧರ್ಮಪ್ಪ, ಶಾಲಾ ಪೋಷಕ ಸಲಹಾ ಸಮಿತಿಯ ಸದಸ್ಯರಾದ ಐಶಾಭಿ, ಯಮುನಾ, ಡಿ.ವಿ. ಮೂರ್ತಿ, ಶಿವಕುಮಾರ್ ಉಪಸ್ಥಿತರಿದ್ದರು.
ನಂತರ ಕಿಶೋರೋತ್ಸವ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ಅತ್ಯಾಕರ್ಷಕ ವಾದ ಉಡುಗೆ ತೊಡುಗೆಗಳ ಮೂಲಕ ನೃತ್ಯ ಪ್ರದರ್ಶನ ನಡೆಯಿತು.

Related Articles

Leave a Reply

Your email address will not be published. Required fields are marked *

Back to top button
error: Content is protected !!