ಶಿಕ್ಷಣ

ಜ್ಞಾನಗಂಗಾ ವಸತಿ ಶಾಲೆಯಲ್ಲಿ ಉತ್ಕರ್ಷ್ ಕಾರ್ಯಕ್ರಮ

ಕುಶಾಲನಗರ, ಡಿ‌ 26:ಕುಶಾಲನಗರದ ಅತ್ತೂರಿನ ಜ್ಞಾನಗಂಗಾ ವಸತಿ ಶಾಲೆಯ 2023-2024 ನೇ ಸಾಲಿನ ವಾರ್ಷಿಕ ಕಾರ್ಯಕ್ರಮ ಉತ್ಕರ್ಷ್ ಅದ್ದೂರಿಯಾಗಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ಡಿವೈಎಸ್ಪಿ ಗಂಗಾದರಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಕೊಡಗು ಜಿಲ್ಲೆಯ ಕ್ರೀಡೆ, ಪರಿಸರ ಹಾಗೂ ವಿಶಿಷ್ಠ ಸಂಸ್ಕೃತಿಗೆ ಹೆಸರುವಾಸಿಯಾಗಿದೆ. ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ವೇದಿಕೆ ಕಲ್ಪಿಸುವ ಮೂಲಕ ಅವರಲ್ಲಿ ಉತ್ತಮ ಮೌಲ್ಯಗಳನ್ನು ಬಿತ್ತಬೇಕಿದೆ ಎಂದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕೊಡಗು ಸೈನಿಕ ಶಾಲೆಯ ಪ್ರಾಂಶುಪಾಲ ಕರ್ನಲ್ ಅಮರ್ ಜೀತ್ ಸಿಂಗ್ ಮಾತನಾಡಿ, ಸಂಸ್ಥೆಯ ಬೆಳವಣಿಗೆಗೆ ಬಲವಾದ ಅಡಿಪಾಯವನ್ನು ನಿರ್ಮಿಸುವಲ್ಲಿ ಮತ್ತು ಶಿಕ್ಷಣ ಮತ್ತು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಅನುಕರಣೀಯ ವಾತಾವರಣವನ್ನು ಒದಗಿಸುವಲ್ಲಿ ಶಾಲೆಯ ಆಡಳಿತ, ಪ್ರಾಂಶುಪಾಲರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ತಮ್ಮ ಅವಿರತ ಪ್ರಯತ್ನಗಳನ್ನು ಶ್ಲಾಘಿಸಿದರು.

ವಾರ್ಷಿಕೋತ್ಸವ ಅಂಗವಾಗಿ ರಾಜ್ಯಮಟ್ಟದ ಜ್ಞಾನಗಂಗಾ ಕಪ್ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿತ್ತು.

ಕಬಡ್ಡಿ, ವಾಲಿಬಾಲ್, ಬ್ಯಾಡ್ಮಿಂಟನ್ ಸ್ಪರ್ಧೆಗಳನ್ನು ನಡೆಸಲಾಯಿತು. ವಿದ್ಯಾರ್ಥಿನಿಯರಿಗೆ ಶಾಸ್ತ್ರೀಯ ನೃತ್ಯ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು. ಕಾರ್ಯಕ್ರಮದಲ್ಲಿ ಜ್ಞಾನಗಂಗಾ ಎಜುಕೇಶನಲ್ ಟ್ರಸ್ಟ್‌ನ ಆಡಳಿತ ಮಂಡಳಿಯ ಅಧ್ಯಕ್ಷ ಕನಕರಾಜು, ಕಾರ್ಯದರ್ಶಿ ಅನಂತ ಪದ್ಮನಾಭ, ಖಜಾಂಚಿ ರಾಮ್ ದೇವಯ್ಯ, ಟ್ರಸ್ಟಿಗಳಾದ ಸುಧೀರ್, ನಾಗೇಂದ್ರ, ನಿಂಗಪ್ಪ, ಸುಮಿತ್ರ, ಶೋಭಾ ಅನಂತ ಪದ್ಮನಾಭ ಮತ್ತು ಶ್ರೀ ಕ್ರಾಂತ್ ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!