ಕ್ರೈಂ

ಟ್ವಿಟ್ಟರ್ ನಲ್ಲಿ ಪ್ರಚೋದನಾಕಾರಿ ಪೋಸ್ಟ್: ಕೊಡಗಿನ ಯುವಕ ಬಂಧನ

ಕುಶಾಲನಗರ, ಡಿ 27: Koki @ Shayan o f g “Guys thers is an group sex event in Madikeri Club Mahindra Resort, Rs.3,500/- per person Bro with safety secrecy maintained no HF 20-35 allowed” ) ಪ್ರಚೋನದಕಾರಿ ಸಂದೇಶವನ್ನು ಸಾಮಾಜಿಕ ಜಾಲಾತಾಣದಲ್ಲಿ ಪೋಸ್ಟ್ ಹಾಕಿರುತ್ತಾರೆ. ಈ ಕುರಿತು ಜಿಲ್ಲಾ ಪೊಲೀಸ್ Social Media Monitoring Cell ನ ಅಧಿಕಾರಿ/ಸಿಬ್ಬಂದಿಗಳು ಮಾಹಿತಿ ನೀಡಿರುತ್ತಾರೆ ಮತ್ತು ಈ ರೀತಿಯ ಸಂದೇಶದಿಂದ ಸಾರ್ವಜನಿಕರಲ್ಲಿ ಪ್ರಚೋದನೆಗೆ ಒಳಗಾಗಿ ಸಮಾಜದ ಸ್ವಾಸ್ಥ್ಯ ಹದಗೆಡುವ ಸಾಧ್ಯತೆ ಇರುವುದರಿಂದ Koki @ Shayan ಎಂಬ ಹೆಸರಿನ ಟ್ವಿಟರ್ ಖಾತೆ ತೆರೆದು ಮೇಲ್ಕಂಡಂತೆ ಅಶ್ಲೀಲವಾಗಿ ಪೋಸ್ಟ್ ಮಾಡಿರುವ ಖಾತೆದಾರನ ಮೇಲೆ ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಬಾಳೆಲೆ ನಿವಾಸಿಯಾದ ಶಯನ್, 20 ವರ್ಷ ಎಂಬುವವನನ್ನು ದಸ್ತಗಿರಿ ಮಾಡಿ ಕ್ರಮ ಕೈಗೊಳ್ಳಲಾಗಿದೆ.

2024 ರ ಹೊಸ ವರ್ಷಾಚರಣೆಯನ್ನು ಸಂಭ್ರಮಿಸುವ ಸಲುವಾಗಿ ಜಿಲ್ಲೆ/ ಹೊರಜಿಲ್ಲೆ/ ಹೊರರಾಜ್ಯಗಳಿಂದ ಪ್ರವಾಸದ ನಿಮಿತ್ತ ಆಗಮಿಸಿ ಜಿಲ್ಲಾ ವ್ಯಾಪ್ತಿಯಲ್ಲಿನ ಹೋಂ ಸ್ಟೇ/ರೆಸಾರ್ಟ್/ಲಾಡ್ಜ್ ಗಳಲ್ಲಿ ತಂಗಲು ಬರುವ ಪ್ರವಾಸಿಗರು ಹಾಗೂ ಸಾರ್ವಜನಿಕರು ಸಾಮಾಜಿಕ ಜಾಲಾತಾಣಗಳಲ್ಲಿ ಸಮಾಜದ ಸ್ವಾಸ್ತ್ರ ಹದಗೆಡುವ ರೀತಿಯ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ಕುರಿತು ಪೋಸ್ಟ್ ಮಾಡುವ ಸುಳ್ಳು ಸಂದೇಶಗಳ ಕುರಿತು ಎಚ್ಚರಿಕೆ ವಹಿಸುವುದು ಹಾಗೂ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳು ನಡೆಸುತ್ತಿರುವುದು ಕಂಡುಬಂದಲ್ಲಿ ಜಿಲ್ಲಾ ಪೊಲೀಸ್ ಕಚೇರಿ ದೂರವಾಣಿಗೆ ಸಂಖ್ಯೆ: 08272-228300, 9480804900 ಕ್ಕೆ ಕರೆ ಮಾಡಿ ಮಾಹಿತಿ ಒದಗಿಸುವಂತೆ ಸಾರ್ವಜನಿಕರಲ್ಲಿ ಕೋರಿದೆ.

ವಿಶೇಷ ಸೂಚನೆ:- ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿನ ಹೋಂ ಸ್ಟೇ/ರೆಸಾರ್ಟ್/ಲಾಡ್ಜ್ ಗಳಲ್ಲಿ

ಸಮಾಜದ ಸ್ವಾಸ್ಥ್ಯ ಹದಗೆಡುವ ರೀತಿಯ ಯಾವುದೇ ರೀತಿಯ ಅನೈತಿಕ ಅಕ್ರಮ ಚಟುವಟಿಕೆಗಳು ನಡೆಸುತ್ತಿರುವ ಕುರಿತು ಭಾವಚಿತ್ರ/ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ (Facebook, Instagram, Twitter & etc.) ಹಂಚಿಕೊಂಡಿರುವ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆ/ ತುರ್ತು ಸಹಾಯವಾಣಿ 112 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಸಾರ್ವಜನಿಕರಲ್ಲಿ ಕೋರುತೇವೆ. ಅಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ.

Related Articles

Leave a Reply

Your email address will not be published. Required fields are marked *

Back to top button
error: Content is protected !!