ಕುಶಾಲನಗರ ಡಿ 29: ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಕರೊಂದಿಗೆ ಪೋಷಕರು ಸಹಕಾರ ನೀಡಬೇಕು ಎಂದು
ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ
ಎಸ್.ಭಾಗ್ಯಮ್ಮ ಸಲಹೆ ನೀಡಿದರು.
ಪಟ್ಟಣದ ಕೆ ಹೆಚ್ ಬಿ ಕಾಲೋನಿಯಲ್ಲಿರುವ
ಮಾರುತಿ ವಿದ್ಯಾಸಂಸ್ಥೆ, ಜ್ಞಾನ ಭಾರತಿ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಅವರ ಭವಿಷ್ಯ ಉಜ್ವಲಗೊಳಿಸಲು ಪೋಷಕರು ಹೆಚ್ಚಿನ ಗಮನ ಹರಿಸಬೇಕು.
ಶಾಲೆಯ ಪಕ್ಕದಲ್ಲಿಯೇ ರಸ್ತೆ ಹಾದು ಹೋಗಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು.ಜೊತೆಗೆ ಮಕ್ಕಳಲ್ಲಿ ಶಿಸ್ತು,ಸಂಯಮ ಹಾಗೂ ಸಮಯ ಪ್ರಜ್ಞೆಯನ್ನು ಬೆಳೆಸಬೇಕು ಎಂದರು.
ಪುರಸಭೆ ಸದಸ್ಯೆ ಜಯಲಕ್ಷ್ಮಿ ನಂಜುಂಡಸ್ವಾಮಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಕ್ಕಳು ಮೊಬೈಲ್ ,ಟಿವಿ ವೀಕ್ಷಣೆಗೆ ಹೆಚ್ಚಿನ ಒತ್ತು ನೀಡುತ್ತಿದ್ದು, ಇದರಿಂದ ಶೈಕ್ಷಣಿಕ ಪ್ರಗತಿಗೆ ಹಿನ್ನಡೆ ಆಗುವ ಸಾಧ್ಯತೆ ಇದೆ.ಆದ್ದರಿಂದ ಪೋಷಕರು ಮಕ್ಕಳಿಗೆ ಮೊಬೈಲ್ ಕೊಡದೆ ಅವರು ಓದಿನ ಕಡೆಗೆ ಗಮನ ಸೆಳೆಯಬೇಕು ಎಂದರು.
ಮಾರುತಿ ವಿದ್ಯಾಸಂಸ್ಥೆ ಅಧ್ಯಕ್ಷ ಜಿ.ಎಲ್.ನಾಗರಾಜು ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದ ಮೂರು ದಶಕಗಳ ಹಿಂದೆ ಊರಿನ ಹಿರಿಯರು ಸೇರಿಕೊಂಡು ಸೇವಾ ಮನೋಭಾವದಿಂದ ಯಾವುದೇ ಸ್ವಾರ್ಥ ಇಲ್ಲದೆ ಸಮಾಜಕ್ಕೆ ಏನಾದ್ರು ಕೊಡುಗೆ ನೀಡಬೇಕು ಎಂಬ ಉದ್ದೇಶದಿಂದ ಮಾರುತಿ
ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿದೆವು.ಇದೀಗ ಶಿಕ್ಷಕರ,ಆಡಳಿತ ಮಂಡಳಿ ಹಾಗೂ ಪೋಷಕರ ಸಹಕಾರದಿಂದ ಶಾಲೆ ಅಭಿವೃದ್ಧಿ ಹೊಂದಿದೆ. ಈ ಶಾಲೆಯಲ್ಲಿ ಕಡಿಮೆ ಶುಲ್ಕ ದೊಂದಿಗೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ ಎಂದರು.
ಮಾರುತಿ ವಿದ್ಯಾಸಂಸ್ಥೆ ಕಾರ್ಯದರ್ಶಿ ಪುಂಡಾರೀಕಾಕ್ಷ ಅವರು ವಾರ್ಷಿಕ ವರದಿ ವಾಚಿಸಿದರು.
ವೇದಿಕೆಯಲ್ಲಿ ಸಂಸ್ಥೆ ನಿರ್ದೇಶಕರಾದ ಪಿ.ಪಿ.ಸತ್ಯನಾರಾಯಣ,
ಬಿ.ಆರ್.ನಾಗೇಂದ್ರ ಪ್ರಸಾದ್,ಅಶೋಕ್ ಕುಮಾರ್, ಎಂ.ವಿ.ನಾರಾಯಣ, ರಾಜೇಂದ್ರ, ಅರುಣ್, ವೈಶಾಖ್,ರಾಜೀವ್,ಭಾಗ್ಯಮ್ಮ,ಬೋಜಣ್ಣನಂಜಪ್ಪ
ಶಿಕ್ಷಣ ಇಲಾಖೆಯ ಸಮಾನ್ವಯಾಧಿಕಾರಿ ಹೇಮಂತ್,ಬಿ.ಆರ್.ಸಿ.ಲೋಕೇಶ್,
ಪ್ರೌಢಮುಖ್ಯ ಶಿಕ್ಷಕಿ ತ್ರಿವೇಣಿ, ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಚಂದ್ರಕಲಾ ಪಾಲ್ಗೊಂಡಿದ್ದರು.
ಶಾಲಾ ಮಕ್ಕಳಿಗೆ ಆಯೋಜಿಸಿದ್ದ ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತರಿಗೆ ಅತಿಥಿಗಳು ಬಹುಮಾನ ವಿತರಣೆ ಮಾಡಿದರು. ಕಳೆದ ಸಾಲಿನ ಎಸ್.ಎಸ್.ಎಲ್.ಸಿ.ಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಾದ ಪಿ.ಬಿ.ಪ್ರಭಾ, ಎ. ರಮ್ಯಾಶ್ರೀ
ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಶಾಲೆಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿದ ಕನ್ನಿಕಾ ವಿವಿದ್ದೊದ್ದೇಶ ಸಹಕಾರ ಸಂಘದ ನಿರ್ದೇಶಕ ವೈಶಾಖ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
Back to top button
error: Content is protected !!