ಕುಶಾಲನಗರ ಡಿ 1 : ವಿದ್ಯಾರ್ಥಿಗಳ ತಮ್ಮ ಪೋಷಕರ ಹಾಗೂ ಗುರುಗಳ ನಿರೀಕ್ಷೆಯಂತೆ ಚನ್ನಾಗಿ ಓದಿ ಸಮಾಜದಲ್ಲಿ ಉತ್ತಮ ಸ್ಥಾನಮಾನ ಹೊಂದಬೇಕು ಎಂದು ಸೋಮವಾರಪೇಟೆ ತಾಲ್ಲೂಕು ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ಮಿಲನ ಭರತ್ ಸಲಹೆ ನೀಡಿದರು.
ಸಮೀಪದ ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜು ಶ್ರೀ ಕಾವೇರಿ ವಿದ್ಯಾರ್ಥಿ ಸಂಘದ ಸಮಾರೋಪ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳ ಉತ್ತಮ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ರಾಷ್ಟ್ರಕವಿಗಳ ಹಾಗೂ ಸಾಹಿತಿಗಳ ಪುಸ್ತಕಗಳನ್ನು ಓದುವ ಮೂಲಕ ಸಾಹಿತ್ಯಾಸಕ್ತಿ ಬೆಳೆಸಿಕೊಳ್ಳಬೇಕು ಎಂದರು.
ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ನಿವೃತ್ತ ಪ್ರಾಂಶುಪಾಲರು ಆದ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಎಚ್.ವಿ.ಶಿವಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲತೆಯನ್ನು ಮೈಗೂಡಿಸಿಕೊಂಡು ಉನ್ನತ ಶಿಕ್ಷಣ ಪಡೆದು ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಚ್.ಎಲ್.ರಮೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳ ಚೆನ್ನಾಗಿ ಓದಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ತರಬೇಕು ಎಂದು ಹೇಳಿದರು.
ಮುಖ್ಯ ಶಿಕ್ಷಕ ಬಸವರಾಜ ಶೆಟ್ಟಿ ಶಾಲಾ ವಾರ್ಷಿಕ ವರದಿ ವಾಚಿಸಿದರು.
ಈ ಸಂದರ್ಭ ಗ್ರಾಮ ಪಂಚಾಯತಿ ಅಧ್ಯಕ್ಷೆ ಎಚ್.ಪಿ.ಅರುಣಾ ಕುಮಾರಿ ,ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಎಚ್.ಎಸ್.ಅಶೋಕ್, ವಿದ್ಯಾಸಂಸ್ಥೆ ಕಾರ್ಯದರ್ಶಿ ನಾಗೇಂದ್ರ, ನಿರ್ದೇಶಕ ಎಚ್.ಎನ್, ಬಸವರಾಜ ,ಜವರಪ್ಪ, ರಾಜಶೇಖರ್, ಎಚ್.ಪಿ.ಚಂದ್ರುಕುಮಾರ್, ಉದ್ಯಮಿ ಎಚ್.ಸಿ.ಸಂತೋಷ್, ಹಿರಿಯ ವಿದ್ಯಾರ್ಥಿ ಸಂಘದ ರಾಮಶೆಟ್ರು, ಉಮೇಶ್, ಲೋಕೇಶ್, ಉದಯಕುಮಾರ್, ಕೆನರಾ ಬ್ಯಾಂಕ್ ವ್ಯವಸ್ಥಾಪಕ ಎಂ.ಆರ್.ಅನಿಕೇತನ್ , ಬಿ.ಆರ್.ಪಿ.ಲೋಕೇಶ್, ಗ್ರಾಮ ಪಂಚಾಯತಿ ಸದಸ್ಯ ಚಂದ್ರಶೇಖರ್ ಯೋಗಿ, ಪ್ರಾಂಶುಪಾಲ ವಿಜಯಕುಮಾರ್,ಶಿಕ್ಷಕರಾದ ಉದಯ್, ರಮೇಶ್ ಪಾಲ್ಗೊಂಡಿದ್ದರು.ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ನಂತರ ವಿದ್ಯಾರ್ಥಿ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಿ ಎಲ್ಲರ ಗಮನ ಸೆಳೆದರು.
Back to top button
error: Content is protected !!