ಕಾರ್ಯಕ್ರಮ
ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಿದ ಸಿಸಿ ಕ್ಯಾಮೆರಗಳ ಉದ್ಘಾಟನೆ, ಹಸ್ತಾಂತರ ಕಾರ್ಯಕ್ರಮ


ಅಂದಾಜು 20 ಲಕ್ಷಕ್ಕೂ ಅಧಿಕ ವೆಚ್ಚದಲ್ಲಿ ಹಾರಂಗಿ ರಸ್ತೆ, ಗುಡ್ಡೆ ಹೊಸೂರು ಹೆದ್ದಾರಿ ಜಂಕ್ಷನ್, ಕೂಡಿಗೆ ರಸ್ತೆಯ ಕೈಗಾರಿಕಾ ಬಡಾವಣೆ, ಕುಶಾಲನಗರ ಪಟ್ಟಣ ವ್ಯಾಪ್ತಿಯಲ್ಲಿ ಕ್ಯಾಮೆರಗಳನ್ನು ಅಳವಡಿಸಲಾಗಿದೆ ಎಂದು ಅಧ್ಯಕ್ಷರಾದ ಸುದೀಪ್ ಕುಮಾರ್ ಮಾಹಿತಿ ನೀಡಿದರು. ಹಾರಂಗಿ ರಸ್ತೆಯಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುತ್ತಿದ್ದ ಪ್ರಕರಣಗಳು ಈ ಮೂಲಕ ಪತ್ತೆಹಚ್ಚಲಾಗಿದ್ದು ಇದೀಗ ಶೇ. 100ರಷ್ಟು ಸ್ವಚ್ಛತೆ ಕಂಡು ಬಂದಿದೆ ಎಂದರು.